
ಬೆಂಗಳೂರು : ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು.ಇದು ಸರ್ಕಾರದ ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನದ ಭಾಗವಾಗಿದೆ.
ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ‌್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮಾತ್ರ ಅನ್ವಯ ಆಗುವುದು ಹೇಗೆ? ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು. ಬಿಜೆಪಿಯವರು ಎಂತಹಾ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರು, ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
 
				 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						