ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿಮ ಮಾದಗೊಂಡನಹಳ್ಳಿ ಕಾರ್ಯಕ್ಷೇತ್ರದ ಪ್ರಗತಿ ಜ್ಞಾನವಿಕಾಸ ಕೇಂದ್ರದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಸಸಿಗಳನ್ನು ನೆಟ್ಟು ಅದರ ಪೋಷಣೆ ಜವಾಬ್ದಾರಿ ಹೊರಲಾಯಿತು.
ಈ ವೇಳೆ ಒಕ್ಕೂಟದ ಅಧ್ಯಕ್ಷ ರಮೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ವೇತಾ, ಸೇವಾ ಪ್ರತಿನಿಧಿ ಜಯಮ್ಮ,ಆಶಾ ಕಾರ್ಯಕರ್ತೆ ಪದ್ಮಾವತಿ ಮತ್ತಿತರಿದ್ದರು.