ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ, ರಾಜ್ಯಸಭೆಯ ದ್ವೈ ವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ಇಂದು ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಸ್ಥಿತರಿದ್ದರು.