ನೈಸರ್ಗಿಕ ಅವಘಡಗಳ ತಡೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಮುಂಗಾರು ಮಳೆ ಸಂದರ್ಭದಲ್ಲಿ ಉಂಟಾಗುವ ನೈಸರ್ಗಿಕ ಅವಘಡಗಳನ್ನು ತತಕ್ಷಣದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂಜಾಗ್ರತಾ  ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಮುಂಗಾರು ಮಳೆ ಆರಂಭವಾಗಿದ್ದು, ನೈಸರ್ಗಿಕ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿರುವ ಚರಂಡಿ ಮತ್ತು ನಾಲಾಗಳನ್ನು ಸ್ವಚ್ಛಗೊಳಸಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ರಸ್ತೆಗಳನ್ನು ಪರಿಶೀಲಿಸಿ, ದುರಸ್ತಿಗೆ ಅಗತ್ಯತೆ ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಆರೋಗ್ಯ ಇಲಾಖೆ ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು. ಡೆಂಗ್ಯೂ ಮತ್ತು ಚಿಕ್ಕನ್ ಗುನ್ಯಾ ದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಔಷಧಿ ಸಿಂಪಡಿಸಿ ಸ್ವಚ್ಛತೆ ಕಾಪಾಡಿಕೊಳಲು ಜನರಿಗೆ ಅರಿವು ಮೂಡಿಸಬೇಕು. ಮೇವು ಸಂಗ್ರಹಣೆ ಮತ್ತು  ಕಾಲು ಬಾಯಿ ರೋಗದ ಲಸಿಕೆ ಸೇರಿದಂತೆ ಇತರೆ ಅಗತ್ಯತೆ ಬಗ್ಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.    

ಅಪಾಯದಲ್ಲಿರುವ ಹಳೆ ಮರಗಳನ್ನು ಹಾಗೂ ಶಿಥಿಲ ಕಟ್ಟಡ ಗಳನ್ನು ತೆರವುಗೊಳಿಸಬೇಕು. ಬೆಸ್ಕಾಂ ಅಧಿಕಾರಿಗಳ ಸಹಕಾರದೊಂದಿಗೆ ವಿದ್ಯುತ್ ತಂತಿ ಹಾಗೂ  ಕಂಬಗಳನ್ನು ಪರಿಶೀಲಿಸಿ, ಅಪಾಯಕಾರಿಯಾದ ಕಂಬಗಳನ್ನು ತೆರವುಗೊಳುಸುವಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ  ಮಂಜುಳಾದೇವಿ, ಉಪ ಪೊಲೀಸ್ ಅಧೀಕ್ಷಕರಾದ ರಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಸುಮ,ಜಿಲ್ಲಾ ವಿಪತ್ತು ತಜ್ಞೆ ವಿನೂತ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!