ಕ್ವಾರಂಟೈನ್ ಅಲ್ಲಿರುವವರಿಗೆ ಸುಸಜ್ಜಿತ ಸೌಲಭ್ಯ ಒದಗಿಸಲಾಗಿದೆ: ಕೆ. ಗೋಪಾಲಯ್ಯ

ಹಾಸನ : ಹೊರರಾಜ್ಯದಿಂದ ಬಂದವರನ್ನು  ಕ್ವಾರಂಟೈನ್ ಮಾಡಿ ಅವರಿಗೆ ನೀಡಬೇಕಾದ ಸುಸಜ್ಜಿತ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕು ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಾಗೂ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಜಿಲ್ಲೆಯ ಸಂಪೂರ್ಣ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಹೊರ ರಾಜ್ಯದಿಂದ ಬರುವ ಎಲ್ಲರ ತಪಾಸಣೆ ಮಾಡಿ ವರದಿ ಬಂದ ನಂತರವೇ ಸೋಂಕು ಇಲ್ಲದವರನ್ನು ಅವರವರ ಮನೆಗಳಿಗೆ ಕಳಿಸಲಾಗುತ್ತದೆ. ಹಾಗೆಯೇ ಪಾಸಿಟೀವ್ ಬಂದವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್-19 ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸುರಕ್ಷತಾ ಸಾಧನಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಉಸ್ತವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಹೇಳಿದರು.

ಹಾಸನ ಜಿಲ್ಲೆಗೆ ಪ್ರತಿವಾರ ಭೇಟಿ ನೀಡಲಾಗುವುದು. ಬಡವರು ಹಾಗೂ ಸಾರ್ವಜನಿಕರ ಸಮಸ್ಯೆಗಳಿದ್ದರೆ ಅವುಗಳಿಗೆ ಸ್ಪಂದಿಸಿ ಕೂಡಲೆ ಅವುಗಳ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಖಾಸಗಿ ಬ್ಯಾಂಕ್‍ಗಳಲ್ಲಿ ಗ್ರಾಹಕರಿಗೆ ಸಾಲದ ಕಂತುಗಳನ್ನು ಕಟ್ಟುವಂತೆ ಒತ್ತಡ ಹೇರುತ್ತಿದ್ದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರಲ್ಲದೆ, ಜಿಲ್ಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಎಲ್ಲಾ ಜನ ಪ್ರತಿನಿಧಿಗಳ ಸಹಕಾರ ಪಡೆದು ಅಭಿವೃದ್ಧಿಯ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಶಾಸಕ ಸಿ.ಎನ್. ಬಾಲಕೃಷ್ಣ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸತೀಶ್, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ತಹಶಿಲ್ದಾರ್ ಮಾರುತಿ ಮತ್ತಿತರರು ಹಾಜರಿದ್ದರು.

*********

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]