ದೊಡ್ಡಬಳ್ಳಾಪುರ: ಕೋವಿಡ್-19 ಲಾಕ್‍ಡೌನ್ ನಿಂದಾಗಿ ಮುಸುಕಿನ ಜೋಳ ಬೇಡಿಕೆ ಇಲ್ಲದ ಕಾರಣ ಮುಸುಕಿನ ಜೋಳ ಬೆಳೆದ ರೈತರು ಸಂಕಷ್ಟಗೊಳಗಾಗಿರುವ ಹಿನ್ನೆಲೆ ಮುಸುಕಿನ ಜೋಳ ಬೆಳೆಗಾರರಿಗೆ ಆರ್ಥಿಕ ನೆರವು ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಈಗಾಗಲೇ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇರೆಗೆ ಹಾಗೂ ಬೆಳೆ ಸಮೀಕ್ಷೆ ಆಗದೇ ಇರುವ ಗ್ರಾಮಗಳ (ಹಿಂಗಾರು ಹಾಗೂ ಬೇಸಿಗೆ ಹಂಗಾಮು ಮಾತ್ರ) ರೈತ ಬಾಂಧವರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ 2020ರ ಜೂನ್ 24 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.
ಆಧಾರ್ ಕಾರ್ಡ್ ಪ್ರತಿ, ಪಹಣಿ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರಗಳನ್ನು ರೈತರು ಸಲ್ಲಿಸುವುದು.
ಈಗಾಗಲೇ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಫಲಾನುಭವಿಗಳ ಪಟ್ಟಿಯನ್ನು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.