ಕಳಪೆ ಆಹಾರ ಧಾನ್ಯ ಕಂಡು ಸಚಿವ ಗೋಪಾಲಯ್ಯ ಗರಂ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಡಿತರ ಧಾನ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಯಾದಗಿರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಪ್ರತಿ ತಿಂಗಳು ಅನೇಕ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,ಅದರಂತೆ ಇಂದು ಯಾದಗಿರಿ ಜಿಲ್ಲೆಗೆ ಆಗಮಿಸಿದ್ದೇನೆ. ಪ್ರಸುತ್ತ ಯಾದಗಿರಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಪಡಿತರ ಧಾನ್ಯಗಳು ಬಡವರಿಗೆ ತಲುಪುತ್ತಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದರು.

ಇನ್ನು ಜಿಲ್ಲೆಯ ಡಿಸಿ,ಜಿ.ಪಂ.ಸಿಇಓ,ಎಸಿ, ತಹಶೀಲ್ದಾರ್ ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು,ಏಪ್ರಿಲ್‌ನಲ್ಲಿ ಕೊಟ್ಟಿರುವ ಪಡಿತರ ಧಾನ್ಯ ಎಷ್ಟು ಖರ್ಚಾಗಿದೆ.ಮೇ ತಿಂಗಳಿನಲ್ಲಿ ಎಷ್ಟು ಜನರಿಗೆ ಕೊಟ್ಟಿದ್ದೇವೆ ಎಂಬುದಾಗಿ ಮಾಹಿತಿ ಪಡೆದಿದ್ದೇನೆ ಜೊತೆಗೆ ಇವತ್ತಿನಿಂದ ವಿತರಣೆ ಮಾಡಲಾಗುತ್ತಿರುವ ಪಡಿತರ ಧಾನ್ಯಗಳ ಗುಣಮಟ್ಟದ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ ಎಂದರು.

ಇದಲ್ಲದೆ, ಹಿಂದುಳಿದ ಯಾದಗಿರಿ ಜಿಲ್ಲೆಗೆ ಮಹಾರಾಷ್ಟ್ರ ಹಾಗೂ ಬೆಂಗಳೂರುನಿಂದ ಸಾವಿರಾರು ಜನರು ಇಲ್ಲಿಗೆ ಬಂದಿದ್ದಾರೆ.ಈ ವೇಳೆ ಜಿಲ್ಲಾಡಳಿತ,ಶಾಸಕರು,ಸಂಸದರು ಶಕ್ತಿ ಮೀರಿ ಕೊರೊನಾ ತಡೆಯಲು ಪ್ರಯತ್ನ ಮಾಡಿದ್ದು,ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಇನ್ನು ಆಹಾರ ಇಲಾಖೆಯಲ್ಲಿ ಕಟ್ಟಕಡೆಯ ಮನುಷ್ಯನಿಗೂ ಆಹಾರ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿರುವ ಆತ್ಮನಿರ್ಭಾರ್ ಯೋಜನೆಯಲ್ಲಿ ಹೊರ ಜಿಲ್ಲೆ,ಹೊರ ರಾಜ್ಯಗಳಿಂದ ಬಂದಿರುವ ಹಾಗೂ ಕಾರ್ಡ್ಗಳಿಲ್ಲದವರಿಗೆ 2 ತಿಂಗಳು ತಲಾ 10 ಕೆಜಿ ಅಕ್ಕಿ ಮತ್ತು 2ಕೆಜಿ ಕಡಲೇ ಕಾಳು ಕೊಡಲು ತೀರ್ಮಾನ ಮಾಡಿ,ರಾಜ್ಯದಲ್ಲಿ 40ಲಕ್ಷ ಜನರಿಗೆ ವಿತರಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಹಾರ ಧಾನ್ಯಗಳನ್ನು ಕಳುಹಿಸಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಜಿಲ್ಲೆಯಲ್ಲಿ ಎಲ್ಲಾ ಬಡ ಕುಟುಂಬದವರಿಗೆ ಆಹಾರ ಧ್ಯಾನಗಳನ್ನು ತಲುಪಿಸುವುದು,ಗುಣಮಟ್ಟದ ಆಹಾರವನ್ನು ಸರಿಯಾಗಿ ಸರಬರಾಜು ಮಾಡಲು ಆಗದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು.ದೂರದ ಊರುಗಳಲ್ಲಿ 4-5ಕಿಲೋ ಮೀಟರ್ ದೂರ ಪಡಿತರ ಅಂಗಡಿಗಳು ಇದ್ದರೇ ಆ ಊರುಗಳಿಗೆ ಖುದ್ದಾಗಿ ತೆರಳಿ ಬಡವರಿಗೆ ಆಹಾರ ಧಾನ್ಯ ವಿತರಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು ಆ ಊರುಗಳಿಗೆ ಹೊಸ ಅಂಗಡಿ ನೀಡಲು ಪ್ರಸ್ತಾವನೆ ಸಲ್ಲಿಸಿದರೇ ಮುಂದಿನ ದಿನಗಳಲ್ಲಿ ಅದನ್ನು ಮಂಜೂರು ಮಾಡಲಾಗುವುದು ಎಂದರು.

ಇನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ 3 ತಿಂಗಳು ಗ್ಯಾಸ್ ಕೊಟ್ಟಿದ್ದೇವೆ,ಮುಖ್ಯಮಂತ್ರಿ ಅನಿಲ್ ಭಾಗ್ಯ ಯೋಜನೆಯಲ್ಲಿ 

3 ತಿಂಗಳು ಉಚಿತ ಗ್ಯಾಸ್ ಕೊಡುತ್ತಿದ್ದು,ಯಾದಗಿರಿ ಜಿಲ್ಲೆಗೆ 2,5೦೦ ಗ್ಯಾಸ್ ಕನೆಕ್ಷನ್ ಹೆಚ್ಚುವರಿಗೆ ಕೊಡಲಾಗಿದ್ದು,ಅದನ್ನು ಬಡವರಿಗೆ ತಲುಪಿಸಲು ವ್ಯವಸ್ಥೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದಲ್ಲದೆ,ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯ ಗೋದಾಮು ಕಟ್ಟಲು 5 ಎಕರೆ ಜಾಗ ಕೊಡಲು ಜಿಲ್ಲಾಡಳಿತಕ್ಕೆ ಸಲ್ಲಿಸಲು ಆಹಾರ ಇಲಾಖೆ ಅಧಿಕಾರಿಗಳು ಸಲ್ಲಿಸಲು ಹೇಳಿದ್ದೇನೆ ಎಂದರು.

ಈ ನಡುವೆ ಯಾದಗಿರಿ ಯರಗೋಳ ನ್ಯಾಯ ಬೆಲೆ ಅಂಗಡಿ ಮತ್ತು ಗೋದಾಮುಗಳಿಗೆ ಭೇಟಿ ನೀಡಿದ ಆಹಾರ ಖಾತೆ ಸಚಿವ ಗೋಪಾಲಯ್ಯ ಪಡಿತರದಾರರಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಗುಣಮಟ್ಟ ವೀಕ್ಷಿಸಿದರು.ಈ ವೇಳೆ ಕಳಪೆ ಮಟ್ಟದ ಬೇಳೆ,ಕಡಲೆ ಕಾಳು ನೋಡಿದ ಸಚಿವರು ಅಧಿಕಾರಿಗಳ ಮೇಲೆ ಗರಂ ಅದರು.

ಅಲ್ಲದೆ, ಈ ಕಳಪೆ ಆಹಾರವನ್ನು ನಿಮ್ಮ ಮನೆಗಳಲ್ಲಿರುವವರಿಗೆ ಕೊಡಿ ಅವರು ತಿನ್ನುತಾರ ನೋಡಿ ಎಂದು ಅಧಿಕಾರಿಗಳನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.ಜೊತೆಗೆ ಯಾವುದೇ ಕಾರಣಕ್ಕೂ ಈ ಕಾಳುಗಳನ್ನು ನೀಡಬೇಡಿ ಹಿಂದಿರುಗಿಸಿ ಎಂದು ಖಡಕ್ ಸೂಚನೆ ನೀಡಿದರು.

**********************

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ

ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ಸಲಹೆಗಳನ್ನು ಸ್ವೀಕರಿಸಿ ಎತ್ತಿನಹೊಳೆ ಯೋಜನೆ; ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109693"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]