ಬೆಂಗಳೂರು: ಜೂನ್ 14 ರಂದು ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣಕ್ಕೆ ಅನುಮತಿ ನೀಡದ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶಕ್ಕೆ ಸರ್ಕಾರ ಮಣಿದಿದ್ದು ಪದಗ್ರಹಣಕ್ಕೆ ಯಾವಾಗ ಬೇಕಾದ್ರೂ ಮಾಡಿಕೊಳ್ಳಲಿ ಎಂದು ಸಿಎಂ ಯಡಿಯೂರಪ್ಪ ಹಸಿರು ನಿಶಾನೆ ತೋರಿದ್ದಾರೆ.
ಈ ವಿಚಾರವಾಗಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ.ಡಿ.ಕೆ. ಶಿವಕುಮಾರ್ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ,ಆದರೆ ಕರೊನಾ ಸೋಂಕಿನ ಕಾರಣ ಹೆಚ್ಚು ಜನ ಸೇರಿಸೋದು ಬೇಡ. ನಿನ್ನೆಯೇ ದೂರವಾಣಿ ಕರೆ ಮಾಡಿ ಮಾತಾಡಿದ್ದೇನೆ.ಅವರೂ ಕೂಡ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಂಡು ಕಾರ್ಯಕ್ರಮ ಮಾಡಲಿ ನಮ್ಮದೇನೂ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ.
ಸಿಎಂ ಅನುಮತಿ ನೀಡಿದ ಬೆನ್ನಲ್ಲೆ ಅಭಿಪ್ರಾಯ ನೀಡಿರುವ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ’ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಸಿಕ್ಕಿರುವುದು ಖುಷಿತಂದಿದೆ. ಕೋಟಿ ಕಾಂಗ್ರೆಸ್ ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಆಗ್ರಹಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಧನ್ಯವಾದಗಳು.
ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದಿದ್ದಾರೆ.