ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಾಣಸವಾಡಿ ಗ್ರಾಮದ ಒಂಬತ್ತು ವರ್ಷದ ಬಾಲಕಿಯಲ್ಲಿ ಕರೊನಾ ವೈರಾಣು ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಬಾಲಕಿಯು (ಪಿ-6140), ಕರೊನಾ ವೈರಾಣು ಸೋಂಕಿತ (ಪಿ-2822) ವ್ಯಕ್ತಿಯ ಸಂಪರ್ಕ ಹೊಂದಿದ್ದ ಹಿನ್ನೆಲೆ,ಆರೋಗ್ಯ ತಪಾಸಣೆ ನಡೆಸಿದಾಗ ಸೋಂಕು ದೃಢಪಟ್ಟಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕಿಯು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.