ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರ ಪಟ್ಟಿಯನ್ನು ಯಾವುದೇ ಲೋಪದೋಷವಿಲ್ಲದೆ ಸಿದ್ಧಪಡಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ” ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪರಿಷ್ಕರಣಾ ಪಟ್ಟಿ ತಯಾರಿಸಲು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡೆಲ್ ಅಧಿಕಾರಿಗಳನ್ನಾಗಿ ಈಗಾಗಲೇ ನೇಮಿಸಿಲಾಗಿದ್ದು ಶೀಘ್ರದಲ್ಲೇ ಮತದಾರರ ಪಟ್ಟಿ ತಯಾರಿಸಲು ಕ್ರಮವಹಿಸಬೇಕೆಂದರು.
ನೆಲಮಂಗಲ ತಾಲ್ಲೂಕಿನನಲ್ಲಿ 517, ಹೊಸಕೋಟೆ ತಾಲ್ಲೂಕಿನಲ್ಲಿ 1054, ದೇವನಹಳ್ಳಿ 458 ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 725 ಮಂದಿ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ಶಿಕ್ಷಕರಿಗೆ ಗಡುವು ನೀಡಿ ಹೆಸರು ಸೇರ್ಪಡೆಗೆ ಕ್ರಮ ವಹಿಸಬೇಕು ಹಾಗೂ ಕನಿಷ್ಠ ಮೂರು ವರ್ಷ ಶಿಕ್ಷಕರಾಗಿ ಕಸಂಬಂಧಿಸಿದ್ವಹಿಸಿದವರನ್ನು ಮಾತ್ರ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಸುವಾಗ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಗಂಗಯ್ಯ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಅಜಿತ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಶಿವರಾಜ್.ಕೆ, ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ಗೀತಾ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಶ್ರೀನಿವಾಸಯ್ಯ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.