ಉಳ್ಳವರೇ ಭೂಮಿ ಒಡೆಯ ಕಾನೂನು ತರಲು ಸರ್ಕಾರ ಮುಂದಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯರು ಎಂಬ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಕೈಗೊಳ್ಳಲಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಪಕ್ಷದ ಹಿರಿಯ ನಾಯಕರ ಸಭೆ ಕರೆದಿದ್ದರು. ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿತ ತರಲು ಮುಂದಾಗಿದೆ. ಕಾಯಿದೆಯಲ್ಲಿನ ಕೆಲ ಅಂಶಗಳನ್ನು ಬದಲಾವಣೆ ಮಾಡುವುದು ಸರ್ಕಾರದ ಉದ್ದೇಶ. 

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೂ ಸುಧಾರಣೆ ಕಾಯಿದೆ ಜಾರಿಗೆ ತಂದ ಬಳಿಕ ಉಳುವವನೇ ಹೊಲದ ಒಡೆಯ ಎಂದಾಯಿತು. ಯಾರ್ಯಾರು ಭೂಮಿ ಒಡೆಯರು ಆಗಬಹುದು ಎಂಬುದನ್ನು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಲಾಗಿತ್ತು.  ಗುತ್ತಿಗೆ ಆಧಾರದ ಮೇಲೆ ಭೂಮಿ ಉಳುಮೆ ಮಾಡುತ್ತಿದ್ದವರಿಗೆ ಇದರಿಂದ ಅನುಕೂಲವಾಗಿತ್ತು. 

ಶ್ರೀಮತಿ ಇಂದಿರಾಗಾಂಧಿ ಮತ್ತು ದೇವರಾಜ ಅರಸು ಅವರ ಸರ್ಕಾರ ಉಳುವವನೇ ಭೂಮಿ ಒಡೆಯ ಎಂದು ಮಾಡಿದರೆ ಈಗಿನ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯ ಎಂದು ಮಾಡಲು ಮುಂದಾಗಿದೆ. 

ಭೂ ಸುಧಾರಣೆ ಕಾಯಿದೆಯ 79ಎ.ಬಿ.ಸಿ ಮತ್ತು 80 ಹಾಗೂ ಸೆಕ್ಷನ್ 63 ಮುಖ್ಯ ತಿದ್ದುಪಡಿಗಳನ್ನು ಪೂರ್ವಾನ್ವಯ ಆಗುವಂತೆ ರದ್ದು ಮಾಡುವುದು, ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು  ವಜಾ ಮಾಡುವುದು ಸರ್ಕಾರದ ಉದ್ದೇಶ. ಕಾನೂನಿನಲ್ಲಿ ನ್ಯೂನತೆ ಇದ್ದರೆ ಮಾತ್ರ ಕಾಲ ಕಾಲಕ್ಕೆ ಬದಲಾವಣೆ ಮಾಡಬೇಕು. ಅದು ಬಿಟ್ಟು ನೆಗಡಿ ಬಂದಿದೆ ಎಂಬ ಕಾರಣಕ್ಕೆ ಮೂಗು ಕುಯ್ಯುವುದು, ಗಾಯವಾಗಿದೆ ಎಂದು ಕಾಲು ಕತ್ತರಿಸುವ ಕೆಲಸಕ್ಕೆ ಕೈ ಹಾಕಬಾರದು. 

ಕಾರ್ಪೊರೇಟ್  ಕಂಪನಿಗಳಿಗೆ, ಶ್ರೀಮಂತರಿಗೆ, ಬಂಡವಾಳ ಶಾಹಿಗಳಿಗೆ ಕೃಷಿ ಭೂಮಿ ಧಾರೆ ಎರೆಯಲು ಸರ್ಕಾರ ಮುಂದಾಗಿದೆ. ಉಳುವವರಿಗೆ ಭೂಮಿ ಸಿಗಬೇಕು. ಒಬ್ಬರಿಗೆ ಉದ್ಯೋಗ ದೊರಕಬೇಕು ಎಂಬ ಕಾರಣಕ್ಕೆ ಈ ಹಿಂದೆ ಭೂ ಸುಧಾರಣೆ ಕಾಯಿದೆ ಜಾರಿಗೆ ತರಲಾಗಿತ್ತು. 

ಕಾಯಿದೆ ತಿದ್ದುಪಡಿಯಿಂದ ಭೂ ಮಾಫಿಯಾ ಆರಂಭವಾಗುತ್ತದೆ. ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಾಗುತ್ತದೆ. ಶ್ರೀಮಂತರು ಭೂಮಿ ಖರೀದಿ ಮಾಡಿ ಲ್ಯಾಂಡ್ ಬ್ಯಾಂಕ್ ಮಾಡಿಕೊಳ್ಳುತ್ತಾರೆ. ಇದರಿಂದ ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗಿ  ಭೂಮಿ ಕಳೆದುಕೊಂಡು ಅವರು ಕೃಷಿ ಕೂಲಿ ಕಾರ್ಮಿಕರಾಗುತ್ತಾರೆ. ಹೀಗಾಗಿ  ಸಂಪುಟದ ನಿರ್ಣಯವನ್ನು ತೀವ್ರವಾಗಿ ವಿರೋಧಿಸುತ್ತೇವೆ. 

ಈ ಕುರಿತು ಪಕ್ಷದ ಹಿರಿಯ ನಾಯಕರು, ರೈತರ ಸಂಘಟನೆಗಳ ಮುಖಂಡರ ಜೊತೆ  ಮತ್ತೊಂದು ಸುತ್ತಿನಲ್ಲಿ ಸಮಗ್ರವಾಗಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು. 

ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ.ಇಬ್ರಾಹಿಂ, ರಮೇಶ್ ಕುಮಾರ್, ಸಲೀಂ ಅಹಮದ್, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಡಾ. ಎಚ್.ಸಿ. ಮಹಾದೇವಪ್ಪ, ಟಿ.ಬಿ. ಜಯಚಂದ್ರ, ನಸೀರ್ ಅಹಮದ್, ಜಮೀರ್ ಅಹಮದ್, ವಿ.ಎಸ್. ಉಗ್ರಪ್ಪ, ಪುಷ್ಪ ಅಮರನಾಥ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಡಾ. ಅಜಯಸಿಂಗ್, ನರೇಂದ್ರ ಸ್ವಾಮಿ, ಐವಾನ್ ಡಿಸೋಜ ಮತ್ತಿರರರು ಭಾಗವಹಿಸಿದ್ದರು.

           *******

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!