ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ 2020-21ನೇ ಸಾಲಿನ ಮುಂಗಾರು-ಹಿಂಗಾರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಇಲಾಖೆ ಮುಳ್ಳಿನ ಹಾಸಿಗೆ ಇದ್ದಂತೆ.ಬಹಳಷ್ಟು ಸವಾಲುಗಳು ಈ ಇಲಾಖೆಯಲ್ಲಿಬರುತ್ತವೆ.ಕೃಷಿ ಮತ್ತು ರೈತರಿಗಾಗಿ ದುಡಿಯುವ ಅವಕಾಶ ತಮಗೆ ಲಭಿಸಿದೆ. ಕೃಷಿ ಇಲಾಖೆಯಲ್ಲಿ ಅಭಿವೃದ್ಧಿಗಳಾದರೆ ಸರ್ಕಾರಕ್ಕೂ ಹೆಸರು ಬರುತ್ತದೆ. ದೇಶದ ಜನರಿಗೆ ಅನ್ನವೂ ಸಿಗುತ್ತದೆ. ಕೋವಿಡ್ ಸಂದಿಗ್ಧತೆ ಎನ್ನುವುದು ಯುದ್ಧದಂತೆ ಎಂದರು.
ಕರೊನಾ ಸಂದರ್ಭದಲ್ಲಿಯೂ ತಾವು ಸುಮ್ಮನೆ ಕೂರದೇ ಮೂವತ್ತು ದಿನಗಳಲ್ಲಿ ಮೂವತ್ತು ಜಿಲ್ಲೆಗಳ ಪ್ರವಾಸ ಮಾಡಿ ರೈತ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ಮಹತ್ತರ ಕ್ರಮಕೈಗೊಳ್ಳಲಾಯಿತು. ಗ್ರೀನ್ ಪಾಸ್, ಅಗ್ರಿವಾರ್ ರೂಮ್ ಸ್ಥಾಪನೆ ಮಾಡಿರುವುದು ಕೊರೊನಾ ಲಾಕ್ಡೌನ್‌ನಲ್ಲಿ ರೈತರಿಗೆ ಬಹಳಷ್ಟು ಉಪಯುಕ್ತವಾಗಿದೆ.ನಕಲಿ ಗೊಬ್ಬರ ಬಿತ್ತನೆಬೀಜದ ವಿರುದ್ಧ ಸಮರ ಸಾರಲಾಯಿತು. ಒತ್ತಡಗಳನ್ನು ಲಕ್ಷಿಸಲಿಲ್ಲ. ಒಬ್ಬ ಕೃಷಿ ಸಚಿವನಾಗಿ ಕಳಪೆಬಿತ್ತನೆ ಬೀಜ ಮಾರಾಟಗಾರರಿಗೆ ಕ್ಷಮೆನೀಡುವುದು ರೈತರಿಗೆ ಮಾಡಿದ ಅನ್ಯಾಯವೆಂದು ಭಾವಿಸಿ ಮನಸಿಗೆ ತೃಪ್ತಿ ಇಲಾಖೆಗೆ ನ್ಯಾಯ ಒದಗಿಸುವಂತೆ ದುಡಿದೆ.ನಮ್ಮ ಮನಸಿಗೆ ಒಪ್ಪುವಂತೆ ಕೆಲಸ ಮಾಡಿದರೆ ದೇವರು ಸಹ ಮೆಚ್ಚುತ್ತಾನೆ ಎಂದರು.
ಸೋಯಾಬಿನ್ ಮಧ್ಯಪ್ರದೇಶ ಆಂದ್ರದಿಂದ ಪೂರೈಕೆಯಾಗುತ್ತಿತ್ತು.ಸುಗ್ಗಿ ಸಂದರ್ಭದಲ್ಲಿ ಫ್ಲಡ್ ಬಂದಿರುವುದರಿಂದ ಬಹಳ ಕಡೆ ಸೋಯಾಬೀನ್ ಬೆಳೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.ಹೀಗಾಗಿ ಈ ಬಾರಿ ರೈತರು ಸೋಯಾ ಬೆಳೆಯುವುದಕ್ಕೂ ಮೊದಲೇ ಭೂಮಿ ಮತ್ತು ವಾತಾವರಣವನ್ನು ನೋಡಿಕೊಂಡು ಮುಂದಾಗಬೇಕು.1.5 ಲಕ್ಷ ಕ್ವಿಂಟಾಲ್ ಸೋಯಾಬೀನ್ ಬೀಜಕ್ಕೆ ಬೇಡಿಕೆ ಇತ್ತು.ಈಗಾಗಲೇ
1.04 ಲಕ್ಷ ಕ್ವಿಂಟಾಲ್ ಪೂರೈಸಿದ್ದೇವೆ. ಕಳೆದ ಬಾರಿಯ ಪ್ರವಾಹದಿಂದಾಗಿ ಪಳಸೋಯಾ ಫಸಲು ಈ ಬಾರಿ ಉತ್ತಮವಾಗಿ ಬರುವುದು ಅನುಮಾನ. ಮುನ್ನೆಚ್ಚರಿಕೆ ಕ್ರಮವಾಗಿ
ರೈತರು ತಮ್ಮ ಭೂಮಿ ಮತ್ತು ಪೂರಕ ವಾತಾವರಣಕ್ಕೆ ಅನುಗುಣವಾದ ಪರ್ಯಾಯ ಬಿತ್ತನೆಗೆ ಮುಂದಾಗಲಿ ಎಂದು ಸಲಹೆ ನೀಡಿದರು.
ಈ ದೇಶದಲ್ಲಿ ಎಲ್ಲರಿಗೂ ಫಸಲು ಬೆಳೆಯಲು ಹಕ್ಕಿದೆ. ಯುವಕರು ಪದವೀಧರು ಕೃಷಿಯತ್ತ ಆಕರ್ಷಿತರಿಗೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವವರಿಗೆ ಇದು ಅನುಕೂಲವಾಗಲಿದೆ. ಕರ್ನಾಟಕದಲ್ಲಿ ಮಾತ್ರ ಕೃಷಿ ಭೂಮಿ ಮಾರಾಟಕ್ಕೆ ನಿಬಂಧನೆ ಇತ್ತು. ಈಗ ಮಾರಾಟಕ್ಕೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕೃಷಿ ಭೂಮಿ ಮಾರಾಟದ ಬಗ್ಗೆ ಸರ್ಕಾರ ಕಂದಾಯ ಇಲಾಖೆ ಮಾರ್ಗಸೂಚಿ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಲಿದೆ.
ಕೋವಿಡ್‌ನಿಂದ ಪರಿಸ್ಥಿತಿಯೇ ಬದಲಾಗಿದೆ.
ವರ್ಷಕ್ಕೆ ಕೃಷಿ ವಿಶ್ವವಿದ್ಯಾಲಯದಿಂದ ನಾಲ್ಕು ಲಕ್ಷ ಪದವೀಧರರು ಹೊರಬರುತ್ತಿದ್ದಾರೆ. ಎಲ್ಲರಿಗೂ ಉದ್ಯೋ ಕಷ್ಟ.ಇಂತಹ ಪದವೀಧರರು ಈ ಹೊಸನಿಯಮದಿಂದ ಕೃಷಿಯತ್ತ ಆಕರ್ಷಕವಾಗಿ ಕೃಷಿಯಲ್ಲಿ
ಆಗ್ರೋ ಇಂಡಸ್ಟ್ರೀಸ್‌ಗೂ ಕೃಷಿ ಭೂಮಿ ಅನುಕೂಲವಾಗಲಿದೆ.ಸಂಸ್ಕರಣಾ ಘಟಕ ಶೀಥಲೀಕರಣ ಆಹಾರ ಉತ್ಪಾದನಾ ಘಟಕಗಳಿಗೂ ಇದು ಬಳಕೆಯಾಗಬಹುದು.ಕೃಷಿ ಭೂಮಿ ಕೃಷಿಗೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಬೇಕು. ಕೃಷಿಭೂಮಿ ದುರ್ಬಳಕೆಯಾಗಬಾರದು ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್, ಕೃಷಿ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್ ಸೇರಿದಂತೆ ಮತ್ತಿತರ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.