ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಆಟೋ ಮೂಲಕ ಜನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪುಷ್ಪಾ.ಜಿ.ರಾಯರ್, ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಹಿಪ್ಪರಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್.ಎಸ್ ಸೇರಿದಂತೆ ಮತ್ತಿತ್ತರರಿದ್ದರು.