ಸರ್ಕಾರದ ಅನುದಾನ ಪಡೆಯುವ ಸರ್ಕಾರೇತರ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ : ಶಶಿಕಲಾ‌ ಜೊಲ್ಲೆ

ದೇವನಹಳ್ಳಿ: ಸರ್ಕಾರದ ಅನುದಾನವನ್ನು ಪಡೆದು ಮಹಿಳೆಯರ, ಮಕ್ಕಳ, ಹಿರಿಯ ನಾಗರೀಕರ ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ ಜಿಲ್ಲೆಯಲ್ಲಿ ದುಡಿಯುತ್ತಿರುವ ಸರ್ಕಾರೇತರ ಸಂಸ್ಥೆಗಳ  ಕಾರ್ಯನಿರ್ವಹಣೆ ಕುರಿತು ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ನಡೆಸಲು ಮುಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ.ಅ.ಜೊಲ್ಲೆ ಹೇಳಿದರು.

ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಸರ್ಕಾರದಿಂದ ಮಹಿಳೆಯರ, ಮಕ್ಕಳ, ಹಿರಿಯ ನಾಗರೀಕ ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರೇತರ ಸಂಸ್ಥೆಗಳಿಗೆ ಇಲಾಖೆಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಸಾಕಷ್ಟು ಅನುದಾನವು ಬಿಡುಗಡೆ ಮಾಡಲಾಗುತ್ತಿದ್ದು, ಇದರ ಸಮರ್ಪಕ ಬಳಕೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಅಧಿಕಾರಿಗಳು ಕಚೇರಿ ಕೆಲಸದಲ್ಲೇ ನಿರತರಾಗದೆ ಹೆಚ್ಚಾಗಿ ಕ್ಷೇತ್ರ ಪ್ರವಾಸ ಕೈಗೊಳ್ಳಬೇಕು. ಸರ್ಕಾರೇತರ ಸಂಸ್ಥೆಗಳ ಮುಖೇನ ಅಥವಾ ವೈಯಕ್ತಿಕ ಸೌಲಭ್ಯ ಯೋಜನೆಯಲ್ಲಿ ಅನುದಾನ ಮತ್ತು ಸೌಲಭ್ಯ ಪಡೆದಿರುವವರ ಪ್ರಗತಿಯನ್ನು ತಿಳಿಯಲು ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲಿಸಬೇಕು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಪರಿಣಿತರೊಂದಿಗೆ ಈಗಾಗಲೇ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಆಹಾರ ವಿತರಣೆಯಲ್ಲಿ ಉತ್ತಮ ರೀತಿಯಲ್ಲಿ ಮಾರ್ಪಾಡು ಮಾಡಲಾಗುವುದು.ಶಿಥಿಲಾವಸ್ಥೆಯಲ್ಲಿರುವ  ಅಂಗನವಾಡಿ ಕಟ್ಟಡಗಳನ್ನು   ಗುರುತಿಸಿ, ಅಂತಹ ಕಟ್ಟಡಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ಹಾಗೆ ಅಂಗನವಾಡಿ ಕಟ್ಟಡಗಳನ್ನು ಮಾರ್ಪಡಿಸಲು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹೆಚ್ಚಿನ ಆದ್ಯತೆ ನೀಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಫೋನ್‌ಗಳನ್ನು  ನೀಡಲಾಗುತ್ತಿದ್ದು, ಅಂಗನವಾಡಿಯ ಮಾಹಿತಿ   ಸಂಗ್ರಹವನ್ನು ಡಿಜಿಟಲೀಕರಣಗೊಳಿಸುವ ಮೂಲಕ ಆಹಾರ ಸೋರಿಕೆಯನ್ನು ತಡೆಗಟ್ಟಲು ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ದಮನಿತ ಮಹಿಳೆಯರು, ಹೆಚ್.ಐ.ವಿ. ಸೋಂಕಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಸಾಕಷ್ಟು ಶೋಚನೀಯ ಸ್ಥಿತಿಯಲ್ಲಿದ್ದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು  ಹಾಗೂ ಗೌರವಯುತ ಜೀವನ ರೂಪಿಸಿಕೊಳ್ಳಲು ಸರ್ಕಾರದಿಂದ ಸಹಾಯಸ್ತ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಹೇಳಿದರು. 

ಕರೊನಾ ಭೀತಿಯಿಂದ ಲಾಕ್‌ಡೌನ್ ಅದ ದಿನಗಳಲ್ಲಿ ಜಿಲ್ಲೆಯಲ್ಲಿ ಒಂಭತ್ತು‌ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಅದರಲ್ಲಿ ಒಂದು ಪ್ರಕರಣವನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಿಸಲಾಗಿದೆ. ಬಾಲ್ಯವಿವಾಹದಿಂದಾಗುವ ಸಮಸ್ಯೆಗಳ ಕುರಿತು ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಬಾಲ್ಯವಿವಾಹ ನಿಯಂತ್ರಿಸಲು ಉನ್ನತ  ಅಧಿಕಾರಿಗಳ ಮಟ್ಟದಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. 

ಸಭೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾವಿ.ಟೆಂಗಾಳಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ,ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್,  ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‌ಕುಮಾರ್ ಬಚ್ಚೇಗೌಡ,ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪಾ.ಜಿ.ರಾಯರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು   ಉಪಸ್ಥಿತರಿದ್ದರು.

*****************

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!