ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಕೆ.ಗೋಪಾಲಯ್ಯ

ದೊಡ್ಡಬಳ್ಳಾಪುರ: ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಪಡಿತರ ವಿತರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹೇಳಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಟಿಎಪಿಸಿಎಂಎಸ್ ಆಹಾರ ಧಾನ್ಯ ಸಗಟು ಗೋದಾಮಿಗೆ ಇಂದು ದಿಢೀರ್ ಭೇಟಿ ನೀಡಿ ಅಕ್ಕಿ, ಗೋಧಿ, ತೊಗರಿಬೇಳೆ ಮತ್ತು ಕಡಲೆಕಾಳುಗಳನ್ನು ಮೂಟೆಗಳನ್ನು ಬಿಚ್ಚಿ ಖುದ್ದು ಪರಿಶೀಲನೆ ನಡೆಸಿದರು. 

ಗ್ರಾಹಕರಿಗೆ ವಿತರಿಸಲು ದಾಸ್ತಾನು ಮಾಡಿದ್ದ ಕಡಲೆಕಾಳಿನ ಮೂಟೆಯಲ್ಲಿ ಕಸಕಡ್ಡಿ ಕಂಡುಬಂದಿದ್ದರಿಂದ ಗುಣಮಟ್ಟವಿಲ್ಲದ ಕಾಳುಗಳ ವಿತರಣೆಯನ್ನು ತಕ್ಷಣ  ಸ್ಥಗಿತಗೊಳಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆ ಉಪನಿರ್ದೇಶಕ ಆರ್.ಡಿ.ಸುಬ್ರಹ್ಮಣ್ಯ ಅವರಿಗೆ ಆದೇಶಿಸಿದರು ಹಾಗೂ ಪಡಿತರ ವಿತರಣೆಗೂ ಮುನ್ನ ಪರಿಶೀಲಿಸಬೇಕು ಹಾಗೂ ಕಡಲೆ ಕಾಳಿನಲ್ಲಿನ ಕಸಕಡ್ಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಕಡೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. 

ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೆಯೇ ಗುಣಮಟ್ಟವಿಲ್ಲದ ಕಾಳುಗಳನ್ನು ಹಿಂಪಡೆದು ಗುಣಮಟ್ಟದ ಬೇಳೆ ಕಾಳು ಪೂರೈಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಕಾಳು ಹೊರತುಪಡಿಸಿ ಉಳಿದೆಲ್ಲ ಪಡಿತರ ಗುಣಮಟ್ಟದ್ದಾಗಿದೆ. ಹೊಸಕೋಟೆ ಟಿಎಪಿಸಿಎಂಎಸ್ ಗೋದಾಮು ನಿರ್ವಹಣೆ ಉತ್ತಮವಾಗಿದೆ. ಇಲ್ಲಿನ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ಮುಂಗಡ ಪಡಿತರ ವಿತರಣೆಯಾಗಿದೆ. ಎಪಿಎಲ್, ಬಿಪಿಎಲ್ ಕಾರ್ಡುದಾರರ ಜತೆಗೆ ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರಿಗೆ ಹಾಗೂ ಬಡವರಿಗೆ ಆಧಾರ್ ಕಾರ್ಡ್ ಮಾನದಂಡದಲ್ಲಿ ಪಡಿತರ ವಿತರಣೆಯಾಗುತ್ತಿದೆ.  ಎಲ್ಲಿಯೂ ಪಡಿತರ ವಿತರಣೆಯಲ್ಲಿ ಲೋಪವಾಗಬಾರದು ಎಂಬ ಕಾರಣಕ್ಕೆ ಖುದ್ದು ಪರಿಶೀಲನೆ ನಡೆಸುತ್ತಿರುವುದಾಗಿ ಸಚಿವರು ತಿಳಿಸಿದರು.

ಹೊಸಕೋಟೆ ತಹಶೀಲ್ದಾರ್ ಗೀತಾ, ಟಿಎಪಿಸಿಎಂಎಸ್ ನಿರ್ದೇಶಕ ಉಪ್ಪಾರಳ್ಳಿ ಮುನಿಯಪ್ಪ, ಬಾಬು ರೆಡ್ಡಿ, ಟಿಎಪಿಸಿಎಂಎಸ್ ಸಿಬ್ಬಂದಿ ಸೋಮಶೇಖರ್, ಗೋದಾಮು ಮೇಲ್ವಿಚಾರಕ ದೇವರಾಜ್ ಮತ್ತಿತರರು ಇದ್ದರು.

                   **********

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!