ದಾವಣಗೆರೆಯಲ್ಲಿ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ

ದಾವಣಗೆರೆ: ಬಹುದಿನಗಳ ನಿರೀಕ್ಷೆಯಂತೆ ಜಿಲ್ಲೆಯಲ್ಲಿ ಶುಕ್ರವಾರ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಪರೀಕ್ಷಾ ಕೇಂದ್ರವನ್ನು ಸಚಿವರು, ಸಂಸದರು ಹಾಗೂ ಶಾಸಕರ ಜೊತೆಗೂಡಿ ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಹಳ ದಿನಗಳಿಂದ ಕೋವಿಡ್ ಲ್ಯಾಬ್‍ನ ಬೇಡಿಕೆ ಇತ್ತು. ಇಂದು ಜಿಲ್ಲಾಡಳಿತ ನೆರವೇರಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಲು ಇಷ್ಟಪಡುತ್ತೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವನಾದ ಮೇಲೆ ಜಿಲ್ಲೆಗೆ 15 ಬಾರಿ ಬಂದು ಹೋಗಿದ್ದೇನೆ. ಮುಂದಿನ ಬಾರಿ ಬಂದಾಗ ಪರೀಕ್ಷಾ ಕೇಂದ್ರ ಉದ್ಘಾಟನೆ ಮಾಡಬೇಕು ಎಂದು ಹೇಳಿದ್ದೆ. ಅದರಂತೆ ಇಂದು ನೆರವೇರಿಸಲಾಗಿದೆ. ಈ ಪರೀಕ್ಷಾ ಕೇಂದ್ರದಲ್ಲಿ 3 ಶಿಫ್ಟ್‍ನಲ್ಲಿ ಒಟ್ಟು 200 ಸ್ಯಾಂಪಲ್ ಪರೀಕ್ಷೆ ಮಾಡಬಹುದಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ 3 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಹೆಚ್ಚು ಉಪಯೋಗವಾಗಲಿದೆ ಎಂದರು.

1 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ: ಹಿರಿಯ ನಾಗರಿಕರಿಗೆ ವಿಶೇಷವಾದ ಚಿಕಿತ್ಸೆಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರೂ. 1 ಕೋಟಿ ವೆಚ್ಚದಲ್ಲಿ 10 ಬೆಡ್‍ಗಳ ಹಿರಿಯ ನಾಗರೀಕರ ವಾರ್ಡ್ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಜೊತೆಗೆ ಸರ್ಕಾರಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಹಾಗೂ ಉನ್ನತೀಕರಿಸಲು ಸುಮಾರು ರೂ.100 ಕೋಟಿ ಬೇಕಾಗುತ್ತದೆ ಎಂದು ಮುಖ್ಯಮಂತ್ರ್ರಿಗಳಲ್ಲಿ ಮನವಿ ಮಾಡಲಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೂ ಸಹ ಜಿಲ್ಲಾಡಳಿತದ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.

ಮುಂದಿನ ಮೂರು ವರ್ಷದಲ್ಲಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ತರುವ ಬಗ್ಗೆ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡಲು ಸಚಿವರು ಹಾಗೂ ಶಾಸಕರೊಂದಿಗೆ ಒಗ್ಗೂಡಿ ಒತ್ತಾಯ ಮಾಡುತ್ತೇನೆ ಎಂದ ಅವರು,  ಜಿಲ್ಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಸಂಸದರು, ಶಾಸಕರು, ಜಿಲ್ಲಾಡಳಿತ ಹಾಗೂ ಇಲಾಖಾ ಅಧಿಕಾರಿಗಳೊಂದಿಗೆ ದಿನ ನಿತ್ಯ ಸಂಪರ್ಕದಲ್ಲಿರುವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಹಕಾರ ಸಚಿವ ಸೋಮಶೇಖರ್, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್, ಪ್ರೊ.ಲಿಂಗಣ್ಣ, ಮಾಡಾಳ್ ವಿರೂಪಾಕ್ಷಪ್ಪ, ಮಹಾಪೌರರು ಬಿ.ಜಿ.ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಸಿ ಮಮತಾ ಹೊಸ್‍ಗೌಡರ್, ಡಿಎಚ್‍ಓ ಡಾ.ರಾಘವೇಂದ್ರ ಸ್ವಾಮಿ, ಡಿಎಸ್ ಡಾ.ನಾಗರಾಜ ಮತ್ತಿತರರು ಹಾಜರಿದ್ದರು.             *****************

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!