ದೊಡ್ಡಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಪರಿಷತ್ತಿನ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪರಿಸರವಾದಿ ನಾಗದಳ ನಟರಾಜ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ,ದಾನಿಗಳಿಂದ ಪಡೆದ ರಕ್ತವನ್ನೇ ಕೊಟ್ಟು ಜೀವ ಉಳಿಸಬೇಕಾಗಿರುವುದರಿಂದ ಸ್ವಯಂ ಪ್ರೇರಿತ ರಕ್ತದಾನ ಅತ್ಯಂತ ಹೆಚ್ಚು ಮಹತ್ವದ್ದಾಗಿದೆ. ಆದರೆ ರಕ್ತದಾನದ ಬಗ್ಗೆ ಹಲವಾರು ತಪ್ಪು ಕಲ್ಪನೆಗಳಿವೆ. ರಕ್ತದಾನ ಮಾಡುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ದೂರವಾಗಿ ಆರೋಗ್ಯವಂತರಾಗಲು ಸಹಕಾರಿಯಾಗುತ್ತದೆ. ಆರೋಗ್ಯವಂತರಾದ 18 ರಿಂದ 60 ವರ್ಷದೊಳಗಿನವರು ರಕ್ತದಾನ ಮಾಡಲು ಹಿಂಜರಿಯುವ ಅಗತ್ಯವಿಲ್ಲ. ರಕ್ತದಾನ ನೀಡಿದ 24 ಗಂಟೆಯೊಳಗೆ ಅಷ್ಟೇ ಪ್ರಮಾಣದ ರಕ್ತ ದೇಹದಲ್ಲಿ ಸೃಷ್ಟಿಯಾಗುತ್ತದೆ. ರಕ್ತದಾನದಿಂದ ಜ್ಞಾಪಕ ಶಕ್ತಿ ವೃದ್ದಿ, ಸೌಂದರ್‍ಯ ಅಲ್ಲದೇ ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಹೃದಯಾಘಾತ ಕಡಿಮೆ ಮಾಡಲು ಸಹಕಾರಿಯಾಗುತ್ತದೆ ಎಂಬುದು ಸಂಶೋಧನೆಗಳಿಂದ ದೃಢಪಟ್ಟಿದೆ ಎಂದರು.
ಅಧ್ಯಕ್