ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ವಿದೇಶದಿಂದ ಬಂದ ಚಿತ್ರದುರ್ಗ ಜಿಲ್ಲೆಯ ನಿವಾಸಿಯಲ್ಲಿ ಕೊರೋನಾ ವೈರಾಣು ಸೋಂಕು ಪತ್ತೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
30 ವರ್ಷದ ಸೋಂಕಿತ ವ್ಯಕ್ತಿಯು(ಪಿ-6909) ಚಿತ್ರದುರ್ಗ ಜಿಲ್ಲೆಯ ಕೋಡಿಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ದುಬೈನಿಂದ ಅಂತರರಾಷ್ಟ್ರೀಯ ವಿಮಾನದ ಮೂಲಕ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜೂನ್ 11 ರಂದು ಆಗಮಿಸಿದ್ದು, ಅಂದಿನಿಂದ ದೇವನಹಳ್ಳಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು. ಕೋವಿಡ್-19 ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
****************