ಬೆಂಗಳೂರು: ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಗೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿಯೇ ಆನ್ ಲೈನ್ ಮೂಲಕವೇ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.
ಶಿವಮೊಗ್ಗದ ಸೋಗಾನೆಯಲ್ಲಿ 220 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಾಗಿದೆ.
ಇನ್ನು ಶಿವಮೊಗ್ಗದ ಸೋಗಾನೆಯಲ್ಲಿ ಸ್ಟೇಜ್ ನಿರ್ಮಿಸಿ ಇಲ್ಲಿಯ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
*********