ದೊಡ್ಡಬಳ್ಳಾಪುರ : ಹೆಚ್ಚುತ್ತಿರುವ ಕರೊನಾ ಸೋಂಕನ್ನು ತಡೆಗಟ್ಟಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಲು.ಪ್ರಧಾನಿ ನರೇಂದ್ರ ಮೋದಿ,ಇಂದು ಮತ್ತು ನಾಳೆ ಎರಡು ದಿನ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ಧಾರೆ.
ಎರಡು ಹಂತದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲು ವೇದಿಕೆ ಸಿದ್ದವಾಗಿದ್ದು ಮಂಗಳವಾರ 21,ಬುಧವಾರ 15 ರಾಜ್ಯದ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪ್ರಧಾನಿ ಕಚೇರಿ, ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದು, ಆಯಾ ರಾಜ್ಯಗಳಲ್ಲಿ ಕೊರೊನಾ ವೈರಸ್ ಸ್ಥಿತಿಗತಿಯ ಮಾಹಿತಿ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಕರೊನಾ ಹಾವಳಿ ಆರಂಭವಾದಾಗಿನಿಂದ ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಇದು ಪ್ರಧಾನಿ ಮೋದಿ ಅವರ ಏಳನೇ ವಿಡಿಯೋ ಕಾನ್ಫರೆನ್ಸ್ ಆಗಿರಲಿದೆ.
ಕರೊನಾ ಸೋಂಕು ತಡೆಗಟ್ಟಲು ಕೈಗೊಳ್ಳಬಹುದಾದ ಮಾರ್ಗೋಪಾಯಗಳ ಕುರಿತು ಈ ಸಂಧರ್ಭದಲ್ಲಿ ಚರ್ಚೆ ನಡೆಯಲಿದ್ದು,ಮತ್ತೆ ಲಾಕ್ ಡೌ ಘೋಷಣೆ ಅಥವಾ ಪರ್ಯಾಯ ಮಾರ್ಗಗಳ ಕುರಿತು ಮಹತ್ವದ ನಿರ್ಧಾರಕ್ಕೆ ಬರಬಹುದು ಎನ್ನಲಾಗುತ್ತಿದೆ.
********************