ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ,ಸುರಕ್ಷತೆಗೆ ಆದ್ಯತೆ ನೀಡಲು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಕೋವಿಡ್-19 ಲಾಕ್‌ಡೌನ್ ಹಿನ್ನೆಲೆ ಮಾರ್ಚ್ 23 ರಂದು ನಿಗದಿಯಾಗಿದ, ದ್ವಿತೀಯ ಪಿ.ಯು.ಸಿ.ಯ  ಇಂಗ್ಲೀಷ್ ವಿಷಯದ ಪರೀಕ್ಷೆಯು ಜೂನ್ 18 ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ  ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು  ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ಹೇಳಿದರು.

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು  ದ್ವಿತೀಯ ಪಿ.ಯು.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಿದ್ದು, ಈ ಜಿಲ್ಲೆಯ 8,743 ವಿದ್ಯಾರ್ಥಿಗಳು  ಒಳಗೊಂಡಂತೆ 117  ಹೊರ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸುವ ಮೂಲಕ ಕೊರೋನಾ ವೈರಾಣು ಸೋಂಕು ಹರಡದಂತೆ ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ೧೩ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ಕಡ್ಡಾಯವಾಗಿ ಆರೋಗ್ಯ ಇಲಾಖೆ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣ ಹಾಗೂ ಕೊಠಡಿಯ ಒಳಗೆ ಸಂಪೂರ್ಣವಾಗಿ ಸೋಂಕು ನಿವಾರಕ ಔ?ಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಯಾರಿಗೂ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ.  ಪರೀಕ್ಷೆಯು ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಗುವಂತೆ  ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲು ಮನವಿ ಮಾಡಲಾಗಿದ್ದು, ಕೆಲವು ವಿದ್ಯಾರ್ಥಿಗಳು ತಮ್ಮ ಸ್ವಂತ ವಾಹನದಲ್ಲಿ ಬರುವುದಾಗಿ ತಿಳಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಲಾವತಿ ಅವರು ಸಭೆಗೆ ಮಾಹಿತಿ ನೀಡಿದ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ  ವಿನುತಾರಾಣಿ,  ಜಿಲ್ಲಾ  ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ ಸೇರಿದಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]