ದೊಡ್ಡಬಳ್ಳಾಪುರ: ಫ್ರೂಟ್ಸ್ (Fruits)
ತಂತ್ರಾಂಶದಲ್ಲಿ ನೋಂದಣಿಯಾಗದಿರುವ ರೈತರು ತಮ್ಮ ಆಧಾರ್ ನಂಬರ್, ಬ್ಯಾಂಕ್ ಖಾತೆ , ಆರ್ಟಿಸಿ ಜಮೀನಿನ ದಾಖಲೆಗಳು, ಮೊಬೈಲ್ ಸಂಖ್ಯೆ ಹಾಗೂ ಸಂಪೂರ್ಣ ವಿಳಾಸವನ್ನು ಸಲ್ಲಿಸಿ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,2020 – 21 ನೇ ಸಾಲಿನಲ್ಲಿ ಕೋವಿಡ್ –19ನ ಲಾಕ್ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ 2019-20ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ರೂ.5000/- ರಂತೆ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮಾಡಲು ಸರ್ಕಾರಿ ಆದೇಶ ಹೊರಡಿಸಲಾಗಿದ್ದು,2019-20 ನೇ ಸಾಲಿನಲ್ಲಿ ಮುಸುಕಿನ ಜೋಳ ಬೆಳೆದ ರೈತರಿಗೆ ಬೆಳೆ ತಂತ್ರಾಂಶದಲ್ಲಿ ಈಗ ದಾಖಲಾಗಿರುವ ಬೆಳೆ ವಿವರಗಳ ಆಧಾರದ ಮೇಲೆ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುವುದು ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಮುಸುಕಿನ ಜೋಳ ಬೆಳೆದ ಬೆಳೆಗಾರರ ಪಟ್ಟಿಯನ್ನು ಹಾಗೂ Fruits
ತಂತ್ರಾಂಶದಲ್ಲಿ ನೋಂದಣಿಯಾಗದ ಮುಸುಕಿನ ಜೋಳ ಬೆಳೆಗಾರರ ಪಟ್ಟಿಯನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಕಛೇರಿಯ ನಾಮಫಲಕದಲ್ಲಿ ಪ್ರದರ್ಶಿಸಿಸಲಾಗಿದೆ. ಮುಂದುವರೆದು Fruits ತಂತ್ರಾಂಶದಲ್ಲಿ FID ಹೊಂದಿರುವ ರೈತರನ್ನು ನೇರ ನಗದು ವರ್ಗಾವಣೆಗೆ ಈಗಾಗಲೇ ಸಲ್ಲಿಸಿದೆ.
ಪೌತಿ ಪ್ರಕರಣಗಳಲ್ಲಿ ತಮ್ಮ ಹೆಸರಿನಲ್ಲಿ ಜಮೀನು ಇಲ್ಲದೇ ತಮ್ಮ ಪೂರ್ವಜರ ಹೆಸರಿನಲ್ಲಿ ಜಮೀನು ಇರುವ ರೈತರು ಗ್ರಾಮ ಲೆಕ್ಕಾಧಿಕಾರಿಗಳಿಂದ Certificate of
Succession ಪಡೆಯುವುದು ಹಾಗೂ ಇತರೆ ಕುಟುಂಬ ಸದಸ್ಯರಿಂದ ನಿರಾಕ್ಷೇಪಣಾ ಪತ್ರದೊಂದಿಗೆ ಮೇಲ್ಕಂಡ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದಲ್ಲಿ ಸಲ್ಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
**********************************