ನಗದು ವರ್ಗೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ

ದೊಡ್ಡಬಳ್ಳಾಪುರ: ಕೋವಿಡ್-19 ನಿಯಂತ್ರಣ,ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರ, ನೇಕಾರರಿಗೆ ವಿಶೇಷ ನೆರವು,ನಗದು ವರ್ಗೀಕರಣ ಹಾಗೂ ಆರ್ಥಿಕ ಪುನಶ್ಚೇತನ ಕ್ರಮಗಳಿಗೆ ಒತ್ತಾಯಿಸಿ,ಸಿಪಿಐ(ಎಂ) ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಮಾತನಾಡಿ, ಕೊರೊನಾ ಪರಿಣಾಮದಿಂದಾಗಿ ದೇಶದ ಕಾರ್ಮಿಕರು ಹಾಗೂ ದುಡಿಯುವ ವರ್ಗ ಬೀದಿಪಾಲಾಗಿದ್ದು, ಕೊರೊನಾ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರದ ಮೋದಿ ಸರ್ಕಾರ ವಿಫಲವಾಗಿದೆ. ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿರುವ ಮೋದಿ ಸರ್ಕಾರ ಕಾರ್ಮಿಕರನ್ನು ಬಡ ಜನರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಪಿ.ಎ.ವೆಂಕಟೇಶ್ ಮಾತನಾಡಿ,ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು,ದುಡಿಯುವ ವರ್ಗ ಕೆಲಸವಿಲ್ಲದೇ ಬೀದಿ ಪಾಲಾಗುತ್ತಿದ್ದಾರೆ. ಅಂತರಾಜ್ಯ ಕಾರ್ಮಿಕರು ಕೆಲಸವಿಲ್ಲದೇ ನೂರಾರು ಮೈಲಿ ನಡೆದು, ಹಸಿವಿನಿಂದ ಸಾವನ್ನಪ್ಪಿದ್ದಾರೆ, ಆದರೂ ಸಹ ಮಾಧ್ಯಮಗಳಲ್ಲಿ ಮೋದಿ ಅವರ ಸಾಧನೆ ಗುಣದಾನ ಮಾಡಲಾಗುತ್ತಿದೆ. ನಗರದಲ್ಲಿ ನೇಕಾರರು ಮಗ್ಗಗಳನ್ನು ನಡೆಸಲಾಗದೇ ದಿವಾಳಿಯಾಗಿದ್ದಾರೆ. ಈ ದಿಸೆಯಲ್ಲಿ ಕೊರೊನಾ ವೈರಸ್ ಹಾವಳಿಯಿಂದ ಆದ ಲಾಕ್ಡೌನ್ನಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿ ಪರಿಸ್ಥಿತಿ ಸುಧಾರಿಸುವವರೆವಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವು ಅವಶ್ಯವಿದ್ದು,ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕಿದೆ ಎಂದು ಒತ್ತಾಯಿಸಿದರು.

ಒತ್ತಾಯಗಳು:ಆದಾಯ ತೆರಿಗೆ ಪಾವತಿಸುವ ಮಿತಿಗಳ ಹೊರಗಿರುವ ಎಲ್ಲಾ ಕುಟುಂಬಗಳಿಗೆ ತಿಂಗಳಿಗೆ ರೂ.7500ಗಳಂತೆ ಆರು ತಿಂಗಳ ವರೆಗೆ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ ಯಂತೆ ಆರು ತಿಂಗಳವರೆಗೆ ಉಚಿತ ಆಹಾರ ದಾನ್ಯಗಳನ್ನು ವಿತರಣೆ ಮಾಡಬೇಕು. ಉದ್ಯೋಗ ಖಾತ್ರಿ ಅಡಿಯಲ್ಲಿ ಹೆಚ್ಚಿಸಿದ ಕೂಲಿಯೊಂದಿಗೆ, ನಗರದ  ಬಡವರಿಗೂ ಉದ್ಯೋಗ ಖಾತ್ರಿ ಯೋಜನೆಯನ್ನು ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ತಕ್ಷಣವೇ ಒಂದು ನಿರುದ್ಯೋಗ ಭತ್ಯೆ ನೀಡಬೇಕು. ಖಾಸಗೀಕರಣವನ್ನು ತಡೆಯಬೇಕು. ಕೃಷಿ ಉತ್ಪನ್ನ ಮಾರಾಟ ಹಾಗೂ ವಾಣಿಜ, ಬೆಲೆ ಖಾತರಿ, ಕೃಷಿ ಸೇವೆಗಳ ಕುರಿತ ರೈತರ ಒಪ್ಪಂದ,ಅಗತ್ಯ ಸೇವೆಗಳ ಕಾಯ್ದೆ ತಿದ್ದುಪಡಿ  2020, ಈ ಮೂರು ಸುಗ್ರೀವಾಜ್ಞೆಗಳು ವಾಪಾಸಾಗಬೇಕು. ನೇಕಾರರ ವಿದ್ಯುತ್ ಬಿಲ್ಲ್ಗಳನ್ನು ಮನ್ನಾ ಮಾಡಬೇಕು. ನೇಕಾರರಿಗೆ ಯಾರ್ನ್ ಮತ್ತು ಫ್ಯಾಬ್ರಿಕ್ ಬ್ಯಾಂಕ್ ತೆರೆಯಬೇಕು. ಜಿ.ಎಸ್.ಟಿ.ಯಿಂದ ಮುಕ್ತಿಗೊಳಿಸಬೇಕು. ನೇಯ್ಗೆ ಉದ್ಯಮದಲ್ಲಿರುವವರನ್ನು ಅಸಂಘಟಿತ ಕಾರ್ಮಿಕರನ್ನಾಗಿ ಪರಿಗಣಿಸಬೇಕು. ಜವಳಿ ಇಲಾಖೆಯಿಂದ ಗುರುತಿನ ಚೀಟಿಯನ್ನು ನೀಡಬೇಕು. ಪಕ್ಕದ ರಾಜ್ಯಗಳಲ್ಲಿ ನೀಡುವಂತೆ ತಿಂಗಳಿಗೆ 2 ಸಾವಿರ ನೀಡಬೇಕು. ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಸ್, ಅಗತ್ಯ ಔಷಗಳ ತೀವ್ರ ಕೊರತೆ ಇದ್ದು ಅವುಗಳನ್ನು ಗರಿಷ್ಠಪ್ರಮಾಣದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಪೂರೈಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕೂಡಲೇ ಇಳಿಸಬೇಕು ಎನ್ನುವ ಒತ್ತಾಯಗಳನ್ನು ಮಂಡಿಸಲಾಯಿತು.

ಪ್ರತಿಭಟನೆಯಲ್ಲಿ ಮುಖಂಡರಾದ ಎಸ್.ರುದ್ರಾರಾಧ್ಯ,ರೇಣುಕಾರಾಧ್ಯ, ಚೌಡಯ್ಯ,ಕೆ.ರಘುಕುಮಾರ್,ಪಿ.ಆದಿನಾರಾಯಣ ರೆಡ್ಡಿ,ಹರೀಂದ್ರ, ಆರ್.ಆರ್.ಮನೋಹರ್,ನರಸಿಂಹ ಮೂರ್ತಿ,ಬಸವರಾಜು,ಹರೀಶ್, ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!