ದೊಡ್ಡಬಳ್ಳಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ಹಾಗೂ ಜೀವಮಾನ ಸಾಧನಾ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳು 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ವೆಬ್‌ಸೈಟ್ www.karnataka.gov.in/dyes ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಹಾಗೂ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳು 2019ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಸೇವಾಸಿಂಧು ವೆಬ್‌ಸೈಟ್ https://serviceonline.gov.in/karnataka ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು 2020 ರ ಜುಲೈ 10 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಮೊ.ಸಂ.: 9632778567/9845608598 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****************