ಘನತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಘಟಕದ ಸಮರ್ಪಕ ನಿರ್ವಹಣೆಯಾಗದಿದ್ದಲ್ಲಿ ಶಿಸ್ತು ಕ್ರಮ: ಅರಣ್ಯ ಸಚಿವ ಅನಂದ್‌ಸಿಂಗ್

ನೆಲಮಂಗಲ: ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದ ನಿರ್ವಹಣೆಯು ಸರ್ಕಾರದ ನಿಯಮಗಳ ಅನ್ವಯ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್‌ಸಿಂಗ್ ಅವರು ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕು, ಸೋಂಪುರ ಹೋಬಳಿಯ ಪೆಮ್ಮನಹಳ್ಳಿ, ತಿಮ್ಮನಾಯ್ಕನಹಳ್ಳಿ ಬಳಿಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕಕ್ಕೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.

ಎ ಡಿವಿಜನ್ ಆಫ್ ರಾಮ್ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ ವತಿಯಿಂದ ಕರ್ನಾಟಕ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ದೂರಿನ ಹಿನ್ನೆಲೆ ಖುದ್ದು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು. 

ಸ್ಥಳೀಯರ ಸಹಕಾರದೊಂದಿಗೆ ಸರ್ಕಾರ ನಿಯಮಗಳನ್ನು ಪಾಲಿಸಬೇಕು. ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಇಂಥದ್ದೆ ಪರಿಸ್ಥಿತಿ ಕಂಡುಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಬಾರದಂತೆ ಜಾಗ್ರತೆ ವಹಿಸಬೇಕು ಎಂದರು. 

ಘಟಕದಲ್ಲಿ ನಿರಂತರ ತ್ಯಾಜ್ಯ ಸಂಸ್ಕರಣೆ ನಡೆಯುತ್ತಿದೆ. ಇದರಿಂದ ಹರಡುವ ವಾಸನೆ ಪ್ರಮಾಣವೂ ಹೆಚ್ಚಾಗಿದೆ. ಇದನ್ನು ತಡೆಯಲು ಈ ಪ್ರದೇಶದಲ್ಲಿ 200 ಮೀಟರ್ ಬಫರ್ ಜೋನ್ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಈ ಕಾರ್ಖಾನೆ ಸುತ್ತಮುತ್ತ ಸಾಕಷ್ಟು ಗ್ರಾಮಗಳಿವೆ ಹಾಗೂ ದಾಬಸ್‌ಪೇಟೆ ಪಟ್ಟಣವು ತುಂಬಾ ಹತ್ತಿರದಲ್ಲಿದೆ. ಈ ಘಟಕದಿಂದ ದುರ್ವಾಸನೆ ಬಾರದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಭರವಸೆ ನೀಡಿದರು.

ಕರೊನಾ ಮಹಾಮಾರಿ ವಿಶ್ವವನ್ನೇ ತಲ್ಲಣಗೊಳಿಸಿದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ. ಕೇಂದ್ರ ಸರ್ಕಾರದ ಪೂರಕ ನೆರವಿನೊಂದಿಗೆ ರಾಜ್ಯ ಸರ್ಕಾರವು ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಘಟಕ ಆರಂಭದಿಂದಲೂ ಸಾಕಷ್ಟು ಸಮಸ್ಯೆ ಎದುರಾಗಿದೆ. ಸಂಜೆ ವೇಳೆ ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿದೆ. ತ್ಯಾಜ್ಯ ಘಟಕದ ವಿಷಕಾರಿ ವಸ್ತುಗಳು ಅಂತರ್ಜಲ ಸೇರಿ ಕೊಳವೆಬಾವಿಗಳಲ್ಲಿ ನೀರು ಕಲುಷಿತಗೊಂಡಿವೆ. ಘಟಕದಿಂದ ಬರುವ ನೀರನ್ನು ಕುಡಿದು ಜಾನುವಾರುಗಳು ಮೃತಪಟ್ಟಿವೆ. ಸುತ್ತಮತ್ತಲ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದುರ್ವಾಸನೆಗೆ ಸಾರ್ವಜನಿಕರು ಮೂಗುಮುಚ್ಚಿಕೊಂಡೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು  ಸ್ಥಳೀಯ ಜನಪ್ರತಿನಿಧಿಗಳು ಸಮಸ್ಯೆ ತೋಡಿಕೊಂಡರು. 

ರಾಮ್ಕಿ ಕಂಪನಿ ವ್ಯವಸ್ಥಾಪಕ ಅಮಿತ್ ಚೌಧರಿ ಘಟಕದ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]