ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ಓರ್ವ ವ್ಯಕ್ತಿಯಲ್ಲಿ ಕರೊನಾ ವೈರಾಣು ಸೋಂಕು ಪತ್ತೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಹೊಸಕೋಟೆ ನಗರದ ನಿವಾಸಿ 37 ವರ್ಷದ ಸೋಂಕಿತ ವ್ಯಕ್ತಿಯಲ್ಲಿ(ಪಿ-7578) ಜ್ವರ ಕಂಡು ಬಂದ ಹಿನ್ನೆಲೆ ಕೋವಿಡ್-19 ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿಯು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.