ಹಾಸನ: ಆಹಾರ,ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಇಂದು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೊಂದು ಬಯಲು ಸೀಮೆಗೆ ನೀರು ಪೂರೈಸುವ ಮಹತ್ವದ ಯೋಜನೆ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೇ, ಯೋಜನೆ ಉದ್ದೇಶಕ್ಕೆ ಸ್ವಾದೀನ ಪಡಿಸಿಕೊಂಡ ಜಮೀನನಿಗೆ ಬಾಕಿ ಇರುವ ಪರಿಹಾರವನ್ನು ಸಹ ಶೀಘ್ರವಾಗಿ ವಿತರಿಸಿ ಎಂದು ಸಚಿವರು ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಅರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಉಪ ವಿಭಾಗಾಧಿಕಾರಿ ಗಿರಿಶ್ ನಂದನ್, ಎತ್ತಿನ ಹೊಳೆ ಹೋಜನೆ ಕಾರ್ಯಪಾಲಕ ಅಭಿಯಂತರ ಜಯಣ್ಣ, ತಹಶಿಲ್ದಾರ್ ಮಂಜುನಾಥ್, ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಮತ್ತಿತರರು ಹಾಜರಿದ್ದರು.
**********