ಬೆಂ.ಗ್ರಾ.ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದ 8.347ವಿದ್ಯಾರ್ಥಿಗಳು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಇಂಗ್ಲೀಷ್ ಯಶಸ್ವಿಯಾಗಿದ್ದು, ನೋಂದಾಯಿತ ಹೊರಜಿಲ್ಲೆಯ 204 ವಿದ್ಯಾರ್ಥಿಗಳು ಸೇರಿದಂತೆ 8,688 ವಿದ್ಯಾರ್ಥಿಗಳ ಪೈಕಿ 8,347 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಹೊರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ 341 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕಲಾವತಿ ಅವರು ತಿಳಿಸಿದ್ದಾರೆ. 

ಕೋವಿಡ್-19 ಲಾಕ್‌ಡೌನ್ ಹಿನ್ನೆಲೆ ಮಾರ್ಚ್ 23 ರಂದು ನಿಗದಿಯಾಗಿದ್ದ, ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಮುಂದೂಡಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರದಲ್ಲೂ ವೈದ್ಯಕೀಯ ಸಿಬ್ಬಂದಿಗಳು ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸುವ ಮೂಲಕ ಕರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗೊಂಡಿದ್ದರು.  

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣ ಹಾಗೂ ಕೊಠಡಿಯ ಒಳಗೆ ಸಂಪೂರ್ಣವಾಗಿ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಮೊಬೈಲ್ ಕೊಂಡೊಯ್ಯಲು ಅವಕಾಶವಿರಲಿಲ್ಲ. ಪರೀಕ್ಷೆ ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆದಿದೆ. 

ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವು ವಿದ್ಯಾರ್ಥಿಗಳು ತಮ್ಮ ಸ್ವಂತ ವಾಹನದಲ್ಲಿ ಬಂದು ಪರೀಕ್ಷೆ ಬರೆದಿದ್ದು, ಜಿಲ್ಲೆಯಲ್ಲಿ ಪರೀಕ್ಷಾ ಕಾರ್ಯ ಯಶಸ್ವಿಯಾಗಿ ನಡೆದಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನೆಲಮಂಗಲ ನಗರಸಭೆಯ 7 ಸದಸ್ಯರು ಅನರ್ಹ: ಕಾರಣ ಏನು ಗೊತ್ತೆ..!?

ನೆಲಮಂಗಲ ನಗರಸಭೆಯ 7 ಸದಸ್ಯರು ಅನರ್ಹ: ಕಾರಣ ಏನು ಗೊತ್ತೆ..!?

ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ (Nelamangala Municipal Council) ಏಳು ಸದಸ್ಯರನ್ನು ಅನರ್ಹಗೊಳಿಸಿ (Disqualified) ಜಿಲ್ಲಾಧಿಕಾರಿ ಎ.ಬಿ. ಬಸವರಾಜು (A.B. Basavaraju) ಅವರು ಆದೇಶಿಸಿದ್ದಾರೆ.

[ccc_my_favorite_select_button post_id="119721"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!