ಬೆಳೆ ಸಮೀಕ್ಷೆಯಲ್ಲಿನ ಲೋಪ ಸರಿಪಡಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ

ದೊಡ್ಡಬಳ್ಳಾಪುರ: ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆಯಲ್ಲಿನ ತಪ್ಪಿನಿಂದಾಗಿ ರೈತರಿಗೆ ಸರ್ಕಾರದ ಯಾವುದೇ ಪರಿಹಾರ ಹಾಗೂ ಸೌಲಭ್ಯಗಳು ದೊರೆಯದಂತಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಹಸಿರು ಮನೆ ಹೂವು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಡಿ.ಶ್ಯಾಮಸುಂದರ್, ಪ್ರತಿಯೊಬ್ಬ ರೈತರ ಜಮೀನಿಗೆ ಭೇಟಿ ನೀಡಿ ಜಿಪಿಆರ್ಎಸ್ ಮೂಲಕ ಜಮೀನಿನಲ್ಲಿ ಇರುವ ಬೆಳೆಯ ಪೋಟೋ ಸಮೇತ ಪಹಣಿಯಲ್ಲಿ ಬೆಳೆ ದಾಖಲಿಸಬೇಕು. ಆದರೆ ಕಂದಾಯ ಇಲಾಕೆ ಅಧಿಕಾರಿಗಳು ಬೆಳೆ ಸಮೀಪಕ್ಷೆಯ ದಾಖಲಾತಿಯನ್ನು ಕಚೇರಿಯಲ್ಲೇ ಕುಳಿತು ಯಾವುದೇ ಪೋಟೋಗಳನ್ನು ಹಾಕುವ ಮೂಲಕ ಪಹಣಿಯಲ್ಲಿ ಬೆಳೆ ದಾಖಲು ಮಾಡಲಾಗಿದೆ. ಹತ್ತು ವರ್ಷಗಳಿಂದ ಹಸಿರು ಮನೆ ನಿರ್ಮಾಣ ಮಾಡಿಕೊಂಡು 8 ಎಕರೆ ಪ್ರದೇಶದಲ್ಲಿ ಹೂವು ಬೆಳೆಯಲಾಗುತ್ತಿದೆ. ಆದರೆ 2019-2020ನೇ ಸಾಲಿನ ಪಹಣಿಯಲ್ಲಿ ಕೃಷಿ ಏತರ ಬೆಳೆ ಎಂದು ನಮೋದಿಸಲಾಗಿದೆ. ಲಾಕ್ಡೌನ್ ಜಾರಿಯಿಂದಾಗಿ ಹೂವು ಬೆಳೆಗಾರರಿಗೆ ಆಗಿರುವ ನಷ್ಟವನ್ನು ತುಂಬಿಕೊಡುವ ಸಲುವಾಗಿ ಹೆಕ್ಟೇರ್ಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪರಿಹಾರದ ಮೊತ್ತವನ್ನು ಪಡೆಯಲು ಪಹಣಿಯಲ್ಲಿ ಹೂವು ಬೆಳೆ ಸೇರಿದಂತೆ ಇತರೆ ಯಾವ ಬೆಳೆ ಇದೆ ಎನ್ನುವುದು ಇರಲೇಬೇಕು. ಇದು ಯಾರೋ ಒಬ್ಬ ರೈತರ ಸಮಸ್ಯೆ ಮಾತ್ರ ಆಗಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಬೆಂಬಲ ಬೆಳೆ ಯೋಜನೆಯಲ್ಲಿ ರಾಗಿ ಖರೀದಿಗು ಸಹ ಇದೇ ನಿಯಮ ಮಾಡಿದ್ದರಿಂದ ಬಹುತೇಕ ರೈತರ ರಾಗಿ ಮಾರಾಟ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಈಗ ಹೂವು ಹಾಗೂ ಮುಸುಕಿನಜೋಳದ ಬೆಳೆ ಪರಿಹಾರ ಪಡೆಯಲು ಸಹ ಅಡ್ಡಿಯಾಗಿದೆ ಎಂದರು.

ಧರಣಿ ನಿರತ ರೈತರನ್ನು ಭೇಟಿ ಮಾಡಿದ್ದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಪಹಣಿಯಲ್ಲಿ ಬೆಳೆ ಸಮೀಕ್ಷೆ ವರದಿ ದಾಖಲಾಗಿರುವ ಧೋಷವನ್ನು ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧಾರಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ,ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಹನುಮಂತರಾಯಪ್ಪ, ಹೂವು ಬೆಳೆಗಾರರ ಸಂಘದ ಮುಖಂಡ ಮಲ್ಲೇಶ್ ಇದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!