ದೊಡ್ಡಬಳ್ಳಾಪುರ: ಕರೊನಾ ಸೋಂಕು ತಡೆಗಟ್ಟಲು ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯ ಸರಕಾರ ಆದೇಶಿಸಿದ್ದ,ಮಾಸ್ಕ್ ದಿನಾಚರಣೆ ರಾಜ್ಯಾದ್ಯಂತ ನಡೆಯುತ್ತಿದ್ದು. ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಸಬ್ಇನ್ಸ್ಪೆಕ್ಟರ್ ಬೇಬಿವಾಲೇಕರ್ ನೇತೃತ್ವದಲ್ಲಿ ಮಾಸ್ಕ್ ದಿನಾಚರಣೆ ನಡೆಯಿತು.
ಈ ವೇಳೆ ಮಾತನಾಡಿದ ಅವರು,ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಯಲು ಜನತೆ ಕೈ ಜೋಡಿಸಬೇಕಿದೆ.
ಸರ್ಕಾರ ಕರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಂಡಿದೆ.ಕೇವಲ ಸರ್ಕಾರದಿಂದಲೇ ಕರೊನಾ ತಡೆಗಟ್ಟಲು ಸಾಧ್ಯವಿಲ್ಲ ಎಂಬುದನ್ನು ಸಾರ್ವಜನಿಕರು ಅರಿಯ ಬೇಕಿದ್ದು.ಪ್ರತಿ ನಿತ್ಯ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕನ್ನು ತಡೆಗಟ್ಟಬೇಕೆಂದು ಮನವಿ ಮಾಡಿದರು.
ಈ ವೇಳೆ ಪೊಲೀಸ್ ಸಿಬ್ಬಂದಿಗಳಾದ ಮಲ್ಲಿಕಾರ್ಜುನ್,ರವಿ,ವಿವೇಕಾನಂದ ಮತ್ತಿತರಿದ್ದರು.