ನೇಕಾರ ಕೂಲಿ ಕಾರ್ಮಿಕರು ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೇಕಾರ ಕೂಲಿ ಕಾರ್ಮಿಕರಿಗೆ ನೀಡಲಾಗುವ ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ತಾಲೂಕಿನಲ್ಲಿ 25 ಕ್ಕೂ ಹೆಚ್ಚು ಸೈಬರ್ ಕೇಂದ್ರಗಳಲ್ಲಿ ದತ್ತಾಂಶ ನಮೂದು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರೊಂದಿಗೆ ಅಕೃತ ದಾಖಲೆಗಳಿರುವ ಸಂಘಟನೆಗಳು ಅರ್ಜಿ ಸಲ್ಲಿಸಿದರೆ, ಇಲಾಖೆಯಿಂದ ಅನುಮತಿ  ನೀಡಲಾಗುವುದು ಎಂದು ಜಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

ನಗರದ ಅಪೆರಲ್ ಪಾರ್ಕ್‌ನ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆದ ನೇಕಾರರ ಸಭೆಯಲ್ಲಿ ಅವರು ಮಾತನಾಡಿದರು. 

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ 2ಸಾವಿರ ರೂರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ.ಅರ್ಹ ನೇಕಾರರು  ಸೇವಾಸಿಂಧುವಿನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. 

ಘಟಕದ ಮಾಲೀಕರಿಂದ ನಿಗದಿಪಡಿಸಿದ ನಮೂನೆಯಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ಆಧಾರ್ ಕಾರ್ಡ್,ಡಿ.ಬಿ.ಟಿ ಗೆ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರ, ವಿದ್ಯುತ್ ಮಗ್ಗ ಘಟಕದ ಮುಂದೆ ಕಾರ್‍ಯನಿರ್ವಹಿಸುತ್ತಿರುವ ಫಲಾನುಭವಿಗಳ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್, ಬಾಡಿಗೆ ಅಥವಾ ಲೀಸ್ ದಾಖಲಾತಿ,ಘಟಕದ ಉದ್ಯೋಗ್ ಆಧಾರ್ ಅಥವಾ ಪರವಾನಗಿ ಪತ್ರ,  ಲಭ್ಯವಿದ್ದಲ್ಲಿ ನೇಕಾರರ ವಿವರಗಳನ್ನೊಳಗೊಂಡ ಮಜೂರಿ ಪಾವತಿಯ ಪ್ರತಿಗಳನ್ನು ಅರ್ಜಿಯೊಂದಿಗೆ ಜೂನ್ 30ರೊಳಗೆ ಸಲ್ಲಿಸಬೇಕು ಎಂದರು.

 ಸಭೆಯಲ್ಲಿ ಹಾಜರಿದ್ದ ನೇಕಾರರ ಮುಖಂಡರು ಮಾತನಾಡಿ, ಸರ್ಕಾರ ನೀಡುವ 2 ಸಾವಿರ ಯಾವುದಕ್ಕೂ ಸಾಲದು. ಸರ್ಕಾರ ಅರ್ಜಿ ಸಲ್ಲಿಕೆ ನಿಯಮಗಳನ್ನು ಸಡಿಲಗೊಳಿಸಬೇಕು. ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್ ಒಬ್ಬರ ಹೆಸರಿನಲ್ಲಿದ್ದು, ಮಗ್ಗಗಳು ಇನ್ನೊಬ್ಬರ ಹೆಸರಿನಲ್ಲಿದ್ದರೆ ಅರ್ಜಿ ಸಲ್ಲಿಸಲು ಗೊಂದಲವಾಗುತ್ತದೆ. ಅರ್ಜಿ ಸಲ್ಲಿಸಲು ಸೈಬರ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಾರೆ, ಆದ್ದರಿಂದ ಇಲಾಖೆಯ ವತಿಯಿಂದಲೇ ವ್ಯವಸ್ಥೆ ಮಾಡಿ  ಸರ್ಕಾರದ ನೆರವು ಎಲ್ಲಾ ನೇಕಾರರಿಗೂ ತಲುಪಬೇಕಿದೆ ಎಂದರು.

ಇದಕ್ಕೆ ಉತ್ತರಿಸಿದ ಉಪ ನಿರ್ದೇಶಕರು, ಸೈಬರ್ ಕೇಂದ್ರಗಳಲ್ಲಿ ಹಣ ಪಡೆಯದಂತೆ ಸೂಚಿಸಲಾಗುತ್ತಿದ್ದು, ಹೆಚ್ಚಿನ ಹಣಕ್ಕೆ ಒತ್ತಾಯ ಮಾಡಿದರೆ ಇಲಾಖೆಯ ಗಮನಕ್ಕೆ ತನ್ನಿ. ಈಗಾಗಲೇ ಸೇವಾಸಿಂಧುವಿನಲ್ಲಿ  ತಂತ್ರಾಂಶಗಳು ಅಳವಡಿಸಿರುವುದರಿಂದ ಬದಲಾವಣೆ ಮಾಡಲಾಗದು. ನೇಕಾರರ ಸಮಸ್ಯೆಗಳನ್ನು ಜವಳಿ ಆಯುಕ್ತರು ಹಾಗೂ ಸಚಿವರ ಗಮನಕ್ಕೆ ತರಲಾಗುವುದು.ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಕಾರಿಗಳನ್ನು ಸಂಪರ್ಕ  ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು, ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್, ಟಿಎಂಸಿ ಬ್ಯಾಂಕ್ ಟಿಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್,ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಸೇರಿದಂತೆ ವಿವಿಧ ನೇಕಾರರ ಸಂಘದ ಸದಸ್ಯರು ಹಾಗೂ ನೇಕಾರರು ಹಾಜರಿದ್ದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!