ಬಾಲ್ಯ ವಿವಾಹ ತಡೆ ಪ್ರತಿಯೊಬ್ಬರ ಜವಾಬ್ದಾರಿ: ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ತಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಫೆರೆನ್ಸ್  ಸಭಾಂಗಣದಲ್ಲಿಂದು ನಡೆದ ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಒಂಭತ್ತು ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕಾವಲು ಸಮಿತಿಯು ಮುಂಜಾಗ್ರತೆ ವಹಿಸಬೇಕೆಂದು ತಿಳಿಸಿದ ಅವರು, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕೆಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೇ ತಿಂಗಳ ಅಂತ್ಯದವರೆಗೆ ದೇವನಹಳ್ಳಿಯಲ್ಲಿ 3 ದೊಡ್ಡಬಳ್ಳಾಪುರದಲ್ಲಿ 3, ನೆಲಮಂಗಲದಲ್ಲಿ 2 ಹಾಗೂ ಹೊಸಕೋಟೆಯಲ್ಲಿ 2 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ಈ ಪ್ರಕರಣಗಳನ್ನು ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಕ್ಕಳು ಹಾಗೂ ಪೋಷಕರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ  ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕಿ ಪುಷ್ಪ.ಜಿ.ರಾಯರ್ ಅವರು ಸಭೆಗೆ ಮಾಹಿತಿ ನೀಡಿದರು. 

ಶಾಲೆ ಬಿಟ್ಟ ಮಕ್ಕಳನ್ನು ಪತ್ತೆ ಹಚ್ಚಿ ಆ ಮಕ್ಕಳ ಹಾಗೂ ಕುಟುಂಬಸ್ಥರ ಮೇಲೆ ಗ್ರಾಮ ಮಟ್ಟದ ಕಾವಲು ಸಮಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು. ಬಾಲ್ಯ ವಿವಾಹ ಕುರಿತ ದೂರುಗಳು ಬಂದರೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ   ಬಾಲ್ಯ ವಿವಾಹ ತಡೆದು ಪೋಷಕರು ಹಾಗೂ ಮಕ್ಕಳನ್ನು ಪೊಲೀಸರ ವಶಕ್ಕೆ ನೀಡಿ  ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಜಿಲ್ಲಾ ಸತ್ರ ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನಟೇಶ್ ಅವರು ಮಾತನಾಡಿ ಬಾಲ್ಯ ವಿವಾಹ ತಡೆಗಟ್ಟುವಿಕೆಗಾಗಿ ಇರುವ ಕಾನೂನುಗಳ ಕುರಿತ ಮಾಹಿತಿಯನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!