ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಕಾಶ್ ಇಂಟರ್ನ್ಯಾಷನಲ್ ಶಾಲೆಯ ಸಮೀಪದಲ್ಲಿರುವ ದೇವನಹಳ್ಳಿ ಹಾಗೂ ಹೊಸಕೋಟೆ ತಾಲೂಕು ಮಹಿಳಾ ಪೂರಕ ಪೌಷ್ಠಿಕ ಆಹಾರ ತರಬೇತಿ ಹಾಗೂ ತಯಾರಿಕಾ ಕೇಂದ್ರಕ್ಕೆ ಜಿಲ್ಲಾಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕಳಪೆ ಅಕ್ಕಿ ಕಂಡಬಂದ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಪಂ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್. ಗುಣಮಟ್ಟದ ಆಹಾರ ಪೂರೈಕೆ ಹೆಚ್ಚಿನ ನಿಗಾವಹಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಕುಮಾರಿ ಹೇಮಾವತಿ,ಕಾರ್ಯದರ್ಶಿ ವಿಜಯಶ್ರೀ ಮತ್ತಿತರಿದ್ದರು