ಭಾನುವಾರ ಸೂರ್ಯಗ್ರಹಣ ಹಿನ್ನೆಲೆ: ಭೂಮಿಯಲ್ಲಿ ವಿಕಲಚೇತನ ಮಕ್ಕಳನ್ನು ಹೂಳಿದರೆ ಕಠಿಣ ಕ್ರಮ – ಶರತ್ ಬಿ

ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿಂದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಶನಿವಾರ ಈ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಈ ಸಂಬಂಧ ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಇದೆಲ್ಲದರ ನಡುವೆ ಶನಿವಾರ ಜಿಲ್ಲೆಯಾದ್ಯಂತ ತಾಲೂಕಾ ಪ್ರದೇಶ, ಪಟ್ಟಣ, ಗ್ರಾಮಗಳಲ್ಲಿ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಮಕ್ಕಳಿಗೆ ಪ್ರತ್ಯೇಕ ಕೋಣೆ:

ಇದೇ ಜೂನ್ 25 ರಿಂದ ಜುಲೈ 4ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್‌ಮೆಂಟ್ ಝೋನ್ ಮತ್ತು ಮಹಾರಾಷ್ಟç ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೋಣೆ ಕಾಯ್ದಿರಿಸಲಾಗಿದೆ ಎಂದು ಶರತ್ ಬಿ. ತಿಳಿಸಿದರು.

ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಧರಿಸುವಿಕೆ, ಥರ್ಮಲ್ ಸ್ಕ್ರಿನ್ ಸ್ಕ್ಯಾನಿಂಗ್ ಸೇರದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಕ್ಳೆಂದ್ರದಲ್ಲಿ ಆರೋಗ್ಯ ತಂಡ ನಿಯೋಜಿಸಲಾಗುತ್ತದೆ. ಮುಂಜಾಗ್ರತವಾಗಿ ಎಲ್ಲಾ ಸಾರಿಗೆ ಬಸ್‌ಗಳನ್ನು ಸಹ ಸ್ಯಾನಿಟೈಸ್ ಮಾಡಲು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 2446 ಜನ: ಕೊರೋನಾ ಹಿನ್ನೆಲೆಯಲ್ಲಿ ವಿವಿಧ ರಾಜ್ಯದಿಂದ ಜಿಲ್ಲೆಗೆ ಇದೂವರೆಗೆ ಆಗಮಿಸಿದ 43127 ಪೈಕಿ 40680 ಜನರನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ 2446 ಜನರು ಮಾತ್ರ ಸರ್ಕಾರಿ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದರು.

ರಾಜಕೀಯ

ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್‌ ಆದೇಶ ಪಾಲಿಸಿ: ಆರ್‌.ಅಶೋಕ ಆಗ್ರಹ

ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್‌ ಆದೇಶ ಪಾಲಿಸಿ: ಆರ್‌.ಅಶೋಕ ಆಗ್ರಹ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್‌ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್‌ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

[ccc_my_favorite_select_button post_id="121669"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]