ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಎಂ.ವಿ. ಎಕ್ಸ್‌ಟೆನ್ಷನ್‌ನ ನಿವಾಸಿ 60 ವರ್ಷದ ಮಹಿಳೆ ಕೋವಿಡ್-19 ಸೋಂಕಿನಿಂದ ಜೂನ್ 20 ರಂದು ಬೆಂಗಳೂರು ನಗರದ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ಮೃತಪಟ್ಟ ಮಹಿಳೆಯು ಹೃದಯ ಸಂಬಂಧಿ ಸಮಸ್ಯೆ ಇರುವ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು.ಆರೋಗ್ಯ ತಪಾಸಣೆ ನಡೆಸಿದಾಗ, ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೋವಿಡ್-19 ಮಾರ್ಗಸೂಚಿಗಳನ್ವಯ ಮೃತ ಮಹಿಳೆಯ ಅಂತ್ಯಕ್ರಿಯೆ ಹೊಸಕೋಟೆ ನಗರದ ಎ.ಆರ್. ಬಡಾವಣೆಯಲ್ಲಿರುವ ಮುಸ್ಲಿಂ ಸಮುದಾಯದ ಸ್ಮಶಾನದಲ್ಲಿ ಜೂನ್ 20 ರಂದು ರಾತ್ರಿ 9:00 ಗಂಟೆಗೆ ನಡೆದಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.