ಬೆಂಗಳೂರು: ಯೋಗ ಒಂದು ದಿನದ ಪ್ರದರ್ಶನ ಆಗಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ವಿಶ್ವ ಯೋಗ ದಿನಾಚರಣೆ ಅಂಗವಾಗಿ ತಮ್ಮ ಅಭಿಪ್ರಾಯವನ್ನು ಯೋಗ ನಿರತ ಪೊಟೋ ಮೂಲಕ ಹಂಚಿಕೊಂಡಿರುವ ಅವರು.ಯೋಗ ಒಂದು ದಿನದ ಪ್ರದರ್ಶನ ಆಗಬಾರದು ನಿರಂತರ ಅಭ್ಯಾಸ ಮಾಡಲು ಪ್ರಯತ್ನಿಸಬೇಕು. ಯೋಗಾಭ್ಯಾಸ ವೈಯಕ್ತಿಕವಾಗಿ ನನ್ನ ಆರೋಗ್ಯಕ್ಕೆ ನೆರವಾಗಿದೆ.ನೀವೂ ನಿಮಗಾಗಿ ಯೋಗಾಭ್ಯಾಸ ಮಾಡಿ ಎಂದು ಕರೆ ನೀಡಿದ್ದಾರೆ.