ಯಲಹಂಕ: ವ್ಹೀಲಿಂಗ್ ಮಾಡುವಾಗ ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಕ್ಕೂರು ಫ್ಲೈಓವರ್ ಕೆಳಗಿನ ಏರ್ಪೋರ್ಟ್ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಘಟನೆಯಲ್ಲಿ ಸೈಯ್ಯದ್ ರಿಯಾಜ್, ಆದಿಲ್ ಸ್ಥಳದಲ್ಲೇ ಸಾವಿಗೀಡಾದರೆ, ಮತ್ತೋರ್ವ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಭಾನುವಾರ ರಜೆ ದಿನವಾದ್ದರಿಂದ ಹಾಗೂ ಗ್ರಹಣ ಹಿನ್ನೆಲೆಯಲ್ಲಿ ಸಂಚಾರ ವಿರಳವಾಗಿರುವುದರಿಂದ ಖಾಲಿಯಿದ್ದ ರಸ್ತೆಯಲ್ಲಿ ವ್ಹೀಲಿಂಗ್ ಸಾಹಸ ಮೆರೆಯಲು, ಮಸಣ ಸೇರಿದ್ದಾರೆ.
ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.