ಅಗಸ, ಕ್ಷೌರಿಕರಿಗೆ ಪರಿಹಾರಧನ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್

ದೊಡ್ಡಬಳ್ಳಾಪುರ : ಕೋವಿಡ್‌-19 ಲಾಕ್‌ಡೌನ್ ಹಿನ್ನಲೆ ಆರ್ಥಿಕ ಸಂಕಷ್ಟಕ್ಕೊಳಗಾದ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ರಾಜ್ಯ ಸರ್ಕಾರ ಪರಿಹಾರಧನ ಘೋಷಿಸಿದ್ದು, ನೈಜ ಫಲಾನುಭವಿಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಹೇಳಿದರು. 

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಮ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳು ಅಗಸರಿಗೆ ಹಾಗೂ ಕ್ಷೌರಿಕರಿಗೆ ಒಂದು ಬಾರಿ ರೂ.5000 ಸಾವಿರ ಪರಿಹಾರಧನವನ್ನು ಘೋಷಿಸಿರುವ ಹಿನ್ನೆಲೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಯವರು ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಉದ್ಯೋಗ ದೃಢೀಕರಣ ಪತ್ರ ಸೇರಿದಂತೆ ನಿರ್ದಿಷ್ಟ ದಾಖಲೆಗಳಾದ ಆಧಾರ್ ಕಾರ್ಡ್, ಬಿ.ಪಿ.ಎಲ್. ಕಾರ್ಡ್, ಜನ್ಮ ದಿನಾಂಕಕ್ಕೆ ಸಂಬಂಧಪಟ್ಟ ದಾಖಲೆ ಹಾಗೂ ಪಾಸ್ ಪೋರ್ಟ್ ಅಳತೆ ಒಂದು ಭಾವಚಿತ್ರ ಅಗತ್ಯ ಇದೆ ಎಂದು ಹೇಳಿದರು.

ಸೌಲಭ್ಯ ಪಡೆಯಲು  ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಕ್ಷೌರಿಕ ವೃತ್ತಿಯ ಪರವಾನಗಿ ಪಡೆದ ಅಂಗಡಿ ಅಥವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಿದಲ್ಲಿ, ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.

ಅರ್ಜಿ ಸಲ್ಲಿಸಲು ಇಚ್ಛಿಸುವ ಫಲಾನುಭವಿಗಳು, ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಂದ ಉದ್ಯೋಗ ದೃಢೀಕರಣ ಪತ್ರವನ್ನು ಪಡೆದು ಬಳಿಕ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ  ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.

ಉದ್ಯೋಗ ದೃಢೀಕರಣ ಪತ್ರ ನೀಡುವ ಅಧಿಕಾರಿಗಳು ವೃತ್ತಿಯ ನೈಜತೆ ವಯಸ್ಸು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಪರಿಶೀಲನೆ ನಡೆಸಿದ ನಂತರವೇ ದೃಢೀಕರಣ ಪತ್ರವನ್ನು ನೀಡಬೇಕು ಎಂದು ತಿಳಿಸಿದರು.

ಕಾರ್ಮಿಕ ಅಧಿಕಾರಿ ಧನಂಜಯ್ ಅವರು ಮಾತನಾಡಿ ಮಹಿಳಾ ಫಲಾನುಭವಿಗಳು ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿದರೆ, ಮಾತ್ರ ಪರಿಹಾರ ಸೌಲಭ್ಯಕ್ಕೆ ಅರ್ಹರಾಗುತ್ತಾರೆ. ಬ್ಯೂಟೀಷಿಯನ್ ಅಥವಾ ಇತರೆ ಕೆಲಸಗಳನ್ನು ನಿರ್ವಹಿಸುತ್ತಿರುವಂತಹವರು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ ಎಂದರು. 

ಸಭೆಯಲ್ಲಿ ಕಾರ್ಮಿಕ ಅಧಿಕಾರಿಗಳಾದ ನಿರಂಜನ್, ಶಬಾನಾ ಅಜ್ಮಿ, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ   ಯೋಜನಾ ನಿರ್ದೇಶಕ  ಸುಬ್ಬಾರಾವ್.ಎಸ್, ಕಾರ್ಮಿಕ ನಿರೀಕ್ಷಕರುಗಳಾ ಪ್ರದೀಪ್, ಸುರೇಶ್, ನಾಗರತ್ನ, ಅಂಬಿಕಾ, ಸೇವಾಸಿಂಧು ತಾಂತ್ರಿಕ  ಸಲಹೆಗಾರ ಮಂಜೇಶ್ ಸೇರಿದಂತೆ ಜಿಲ್ಲಾ ಮಟ್ಟದ  ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]