ದೊಡ್ಡಬಳ್ಳಾಪುರ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಹೋಗಲು ಇಚ್ಛಿಸುವ ವ್ಯಕ್ತಿಗಳ ವಿವರವನ್ನು ಅಪ್‌ಲೋಡ್ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಕಾರ ಸಂಘಗಳ ನೋಂದಣಾಧಿಕಾರಿ ಹಾಗೂ ನಿಬಂಧಕರಾದ ಯಶಸ್ವಿನಿ (ಮೊ.ಸಂ.: 9481389269) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆದೇಶಿಸಿದ್ದಾರೆ.
ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಮಸ್ಟರಿಂಗ್ ಸೆಂಟರ್‌ಗಳಲ್ಲಿ ಹೆಲ್ಪ್ ಡೆಸ್ಕ್‌ಗಳಾಗಿ ಕಾರ್ಯನಿರ್ವಹಿಸಲು ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಹರಿಪ್ರಸಾದ್ (ಮೊ.ಸಂ.: 9964117150), ದೇವನಹಳ್ಳಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಹನುಮಂತರಾಜು (ಮೊ.ಸಂ.:9945495911), ನೆಲಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ನೀಲಾಂಜನಮೂರ್ತಿ (ಮೊ.ಸಂ.:9844995353), ಹೊಸಕೋಟೆ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅಶೋಕ್ (ಮೊ.ಸಂ.:9900321668) ಅವರನ್ನು ನೇಮಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.