ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಂದೆಗೆ ಕರೊನಾ ಸೋಂಕು ದೃಢಪಟ್ಟಿದೆ ಎಂದು ಸ್ವತಃ ಸುಧಾಕರ್ ಟ್ವಿಟ್ ಮಾಡಿದ್ದಾರೆ.
ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ.
My father’s COVID19 test has come out positive. Anxiously waiting for reports of other family members. Praying for speedy recovery of my father. ಎಂದು ಬರೆದುಕೊಂಡಿದ್ದಾರೆ.
ಈ ಮೊದಲು ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಟ್ವಿಟ್ ಮಾಡಿದ್ದರು.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಂದೆಗೆ ಕರೊನಾ ಸೋಂಕು ದೃಢಪಟ್ಟಿರುವುದು.ಕರೊನಾ ಮಹಾಮಾರಿಯ ಹಾವಳಿ ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಂಡುಬರುತ್ತಿಲ್ಲ