ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರು ಹಾಗೂ ಬೆಂಗಳೂರು ನಗರ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಹೊಸಕೋಟೆ ನಗರದ ನಿವಾಸಿಗಳಾದ 18 ವರ್ಷದ ಪುರುಷ(ಪಿ-9227) ಹಾಗೂ 39 ವರ್ಷದ ಮಹಿಳೆ(ಪಿ-9228) ಜೂನ್ 14 ರಂದು ಮಹಾರಾಷ್ಟ್ರದಿಂದ ಹಿಂದಿರುಗಿದ್ದು, ಅಂದಿನಿಂದ ಜಡಿಗೇನಹಳ್ಳಿಯ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಲಯದಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿದ್ದು, ಸೋಂಕು ದೃಢಪಟ್ಟ ಹಿನ್ನೆಲೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿಕೊಡಲಾಗಿತ್ತು.
ವಿಜಯಪುರ ಪಟ್ಟಣದ ನಿವಾಸಿಯಾದ 47 ವರ್ಷದ ಪುರುಷ(ಪಿ-9229) ಹಾಗೂ ಬೆಂಗಳೂರು ನಗರ ಜಿಲ್ಲೆಯ ದಾಸನಪುರ ಹೋಬಳಿಯ ಕಲ್ಲೇಗೌಡಪಾಳ್ಯ ಗ್ರಾಮದ ನಿವಾಸಿ 31 ವರ್ಷದ ಪುರುಷ(ಪಿ-9230) ಇನ್‌ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿರುತ್ತದೆ.
ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.