ಬೆಂಗಳೂರು: ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುರೇಶ್ ಕುಮಾರ್ ಅವರ ಜವಾಬ್ದಾರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜೂನ್ 25ರಿಂದ ಆರಂಭವಾಗಲಿರುವ ಎಸ್‌ಎಸ್ಎಲ್‌ಸಿ ಪರೀಕ್ಷೆ ಕುರಿತು ಅಬಿಫ್ರಾಯ ಹಂಚಿಕೊಂಡಿರುವ ಅವರು,ಮಕ್ಕಳ ಹೆತ್ತವರು ರಾಜ್ಯ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಭಂಗ ತರಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುರೇಶ್ ಕುಮಾರ್ ಅವರ ಜವಾಬ್ದಾರಿಯಾಗಿದೆ.
ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಒತ್ತಡಕ್ಕೆ ಒಳಗಾಗಬೇಡಿ.ನೆನಪಿರಲಿ ಇದು ಶಾಲೆಯ ಪರೀಕ್ಷೆ,ಜೀವನದ ಪರೀಕ್ಷೆ ಅಲ್ಲ.
ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ.
Good luck ಎಂದು ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.