ದೊಡ್ಡಬಳ್ಳಾಪುರ: ಇಂದಿನಿಂದ ಆರಂಭವಾಗುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದ್ದು,ಪರೀಕ್ಷಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳುತ್ತಿದ್ದಾರೆ.
ಕರೊನಾ ಸೋಂಕಿನ ಕಾರಣ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿದ್ದು,ತಾಲೂಕು ಶಿಕ್ಷಣ ಇಲಾಖೆ ಸರ್ಕಾರ ನೀಡಿರುವ ಆದೇಶದ ಅನ್ವಯ ಸಿದ್ದತೆ ಕೈಗೊಂಡಿದೆ.
ತಾಲೂಕಿನಲ್ಲಿ 3355 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು.ಕರೊನಾ ಸೋಂಕು ಹರಡುವಿಕೆ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡಲು ಮತ್ತು ಸ್ಯಾನಿಟೈಸೇಷನ್ ಪ್ರಕ್ರಿಯೆಗಾಗಿ ಪ್ರತಿ ಕೇಂದ್ರಕ್ಕೆ 2 ದೈಹಿಕ ಶಿಕ್ಷಕರು,ಮತ್ತು ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು,ಆಶಾ ಕಾರ್ಯಕರ್ತೆಯರು,4 ಪೊಲೀಸ್ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರವನ್ನು ಈಗಾಗಲೇ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು,ಪ್ರತಿ ವಿದ್ಯಾರ್ಥಿಗೆ ಎರಡು ಜೊತೆ ಮಾಸ್ಕ್ ವಿತರಿಸಲಾಗುತ್ತಿದೆ,ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸ್ಯಾನಿಟೈಸರ್ ಪೂರೈಕೆ,ಪರೀಕ್ಷಾ ಕೇಂದ್ರದ ಬಾಗಿಲಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಲು ಹೆಲ್ತ್ ಡೆಸ್ಕ್ ರಚಿಸಿ ತಪಾಸಣೆ ನಡೆಸಲಾಗುತ್ತಿದೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಲಾ ಮೂರು ಅಡಿಯಷ್ಟು ಚೌಕಗಳ ರಚನೆ,ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳಂತೆ ಪ್ರತಿ ಡೆಸ್ಕ್ ಗೆ 3ಅಡಿ ಅಂತರ,ಒಂದು ಕೊಠಡಿಯಲ್ಲಿ 18ರಿಂ20 ಮಂದಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ರೋಗದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲು ಹಾಗೂ N95ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಕರೆತರಲು ಕೆಸ್ಎಸ್ಆರ್ಟಿಸಿ ಇಲಾಖೆಯ ಸಹಕಾರದೊಂದಿಗೆ 15 ಮಾರ್ಗಗಳನ್ನು ರಚಿಸಿ,17 ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿತ್ತು,ಈ ಮಾರ್ಗ ಗಳಿಂದ ಒಟ್ಟು 410 ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದಾರೆ.
ಬಹುತೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿದ್ದು,10.30ರ ವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅವಕಾಶ ನೀಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಹರಿತಲೇಖನಿಗೆ ತಿಳಿಸಿದ್ದಾರೆ.