ಕೌಶಲ್ಯ ಹೊಂದಿರುವ ವಲಸೆ ಕಾರ್ಮಿಕರಿಗೆ ಶೀಘ್ರ ಉದ್ಯೋಗ ದೊರಕಿಸಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ನೋಂದಣಿಯಾಗಿ ಕೌಶಲ್ಯ ಹೊಂದಿರುವ ವಲಸೆ ಕಾರ್ಮಿಕರಿಗೆ ಶ್ರೀಘ್ರವಾಗಿ ಉದ್ಯೋಗ ದೊರಕಿಸುವುದರೊಂದಿಗೆ,ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. 

ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ವಲಸೆ ಕಾರ್ಮಿಕರನ್ನು ಕೌಶಲ್ಯ ಇಲಾಖೆಯಲ್ಲಿ ನೋಂದಾಯಿತ ಮತ್ತು ವಲಸೆ ಕಾರ್ಮಿಕರಿಗೆ ಉದ್ಯೋಗ ಹಾಗೂ ತರಬೇತಿ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಉದ್ಯೋಗ ಕೌಶಲ್ಯ ವೆಬ್‌ಸೈಟ್‌ನಲ್ಲಿ ನೋಂದಣಿಯಾಗಿರುವ ಕೌಶಲ್ಯ ಹೊಂದಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕೈಗಾರಿಕಾ ಘಟಕಗಳಲ್ಲಿ ಖಾಲಿಯಿರುವ ಉದ್ಯೋಗದ ಬಗ್ಗೆ ಮಾಹಿತಿ ಪಡೆದು ಕ್ರಮವಹಿಸಬೇಕು ಎಂದರು.

ಜಿಲ್ಲೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಎಲೆಕ್ಟ್ರೀಷಿಯನ್, ಪ್ಲಂಬರ್, ಪೇಂಟರ್, ಬಡಗಿ, ಚಾಲಕರು ಸೇರಿದಂತೆ ಅಸಂಘಟಿತ ವಲಸೆ ಕಾರ್ಮಿಕರಿಗೆ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಮರು ಕೌಶಲ್ಯ ತರಬೇತಿ ನೀಡಿ  ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಕೌಶಲ್ಯ ತರಬೇತಿ ನೀಡಿದ ವಲಸೆ ಕಾರ್ಮಿಕರಿಗೆ ಇತರೆ ಇಲಾಖೆಯ ಸ್ವ-ಉದ್ಯೋಗ ಯೋಜನೆಗಳ  ಅನುಕೂಲವನ್ನು ಪಡೆಯುವಂತೆ ಸಮನ್ವಯ ಸಾಧಿಸಿ ಸ್ವ-ಉದೋಗಿಗಳಾಗುವಂತೆ ಕ್ರಮವಹಿಸಬೇಕು ಎಂದರು. 

ಸ್ವಸಹಾಯ ಗುಂಪುಗಳು ತಯಾರಿಸುವ ಮಾಸ್ಕ್ಗಳನ್ನು ಮಾರಾಟ ಮಾಡಲು ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ತಾಲ್ಲೂಕು ಕಚೇರಿ ಆವರಣಗಳಲ್ಲಿ ಮಾಸ್ಕ್ ಮಾರಾಟ ಮಾಡಲು ತಾತ್ಕಾಲಿಕ ಸ್ಟಾಲ್‌ಗಳಿಗೆ ಜಾಗ ಕಲ್ಪಿಸಲಾಗುವುದು. ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಭೂಶಂಕರ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ್ ಸೇರಿದಂತೆ  ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]