ನೇಕಾರರ ಬದುಕು ಸಂಕಷ್ಟದಲ್ಲಿದೆ,ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಲಾಕ್ ಡೌನ್ ಪರಿಹಾರ ವಿಳಂಭವೆಂದು ಸರ್ಕಾರ ವಿರುದ್ದ ಹರಿಹಾಯ್ದಿರುವ ಅವರು,ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸುಮಾರು 2 ಲಕ್ಷ  ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿವೆ. ವಾಸ್ತವದಲ್ಲಿ ಸುಮಾರು 7-8 ಲಕ್ಷ ಕುಟುಂಬಗಳು ಈ ವೃತ್ತಿಯನ್ನು ಅವಲಂಬಿಸಿವೆ. ರಾಜ್ಯ ಸರ್ಕಾರ 20 ಎಚ್.ಪಿ ಗಿಂತ ಕಡಿಮೆ ವಿದ್ಯುತ್ ಬಳಸುವ ಮಗ್ಗಗಳನ್ನು ಮಾತ್ರ ಲೆಕ್ಕ ಹಾಕಿ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿರುವುದು ಸರಿ ಅಲ್ಲ. ಕಳೆದ 7-8 ತಿಂಗಳುಗಳಿಂದ ತಯಾರಿಸಿದ ಸೀರೆ, ಬಟ್ಟೆ ಮತ್ತಿತರ ಉತ್ಪನ್ನಗಳು ಮಾರಾಟವಾಗದೆ ಉಳಿದಿವೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅವರೇ ಹೊಣೆ. 

ಕಳೆದ ಐದಾರು ತಿಂಗಳುಗಳಿಂದ ನೇಕಾರರು ಸುಮಾರು ರೂ.1000 ಕೋಟಿ ಮೊತ್ತದ ಉತ್ಪನ್ನವನ್ನು ಸಿದ್ಧಪಡಿಸಿದ್ದಾರೆ. ಇದರಲ್ಲಿ ಕೈ ಮಗ್ಗದಲ್ಲಿ ಉತ್ಪಾದಿಸಿದ ಬಟ್ಟೆಗಳ ಮೌಲ್ಯ ಸುಮಾರು ರೂ.15 ಕೋಟಿಯಾದರೆ ಉಳಿದದ್ದು ವಿದ್ಯುತ್ ಮಗ್ಗಗಳಲ್ಲಿ ತಯಾರಿಸಿದ್ದು. ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು ಮತ್ತು ಪಡಿತರ ವಿತರಣೆ ವ್ಯವಸ್ಥೆಗಳ ಮೂಲಕ ಬಟ್ಟೆಗಳನ್ನು ವಿತರಿಸಿ ನೇಕಾರರ ಸಮಸ್ಯೆಯನ್ನು ಬಗೆಹರಿಸಬಹುದು. ಈ ಇಚ್ಛಾಶಕ್ತಿ ಸರ್ಕಾರಕ್ಕೆ ಇದೆಯೇ? 

ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದ್ಧತಿಯನ್ನು ನೇಕಾರಿಕೆಗೂ ಅಳವಡಿಸಿದರೆ ಅವರ ಕಷ್ಟಕಾಲದಲ್ಲಿ ನೆರವಾಗುತ್ತದೆ. ಹಾಗಾಗಿ ಸರ್ಕಾರ ತಕ್ಷಣ ಆವರ್ತ ನಿಧಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸುತ್ತೇನೆ. ನೇಕಾರರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು  ಘೋಷಿಸಿದ್ದರು. ಆದರೆ ಆಗಸ್ಟ್-2019 ರಿಂದ ಮಾರ್ಚ್-2020 ರವರೆಗೆ 4,500 ಜನರ  ರೂ.18.05 ಕೋಟಿ  ಮತ್ತು ಏಪ್ರಿಲ್ 01 ರಿಂದ ಈವರೆಗೆ ಕೇವಲ 6,000 ಜನರ ರೂ.26 ಕೋಟಿಗಳನ್ನು ಮಾತ್ರ ಮನ್ನಾ ಮಾಡಲಾಗಿದೆ. ಉಳಿದ ಸಾಲ ಮನ್ನಾ ಯಾವಾಗ? ಎಂದು ಪ್ರಶ್ನಿಸಿದ್ದಾರೆ

ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]