ದೊಡ್ಡಬಳ್ಳಾಪುರ: ಎಸ್.ಎಸ್.ಎಲ್.ಸಿ.ಪರೀಕ್ಷೆಯು ಇಂದಿನಿಂದ ಜುಲೈ03
ರವರೆಗೆ ನಡೆಯಲಿದ್ದು, ಮೊದಲನೇ ದಿನವಾದ ಇಂದು ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 12,588 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ನೀಡಿದರು.
ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ಪರೀಕ್ಷೆಗೆ ನೋಂದಾಯಿಸಿದ್ದ ಒಟ್ಟು 13059 ವಿದ್ಯಾರ್ಥಿಗಳಲ್ಲಿ 471 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಒಟ್ಟು 12,588 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 30 ವಿದ್ಯಾರ್ಥಿಗಳು ಕಂಟೈನ್‌ಮೆಂಟ್ ಪ್ರದೇಶಗಳಿಂದ ಬಂದು ಪರೀಕ್ಷೆ ಬರೆದಿದ್ದಾರೆ. 4 ವಿದ್ಯಾರ್ಥಿಗಳು ಅನಾರೋಗ್ಯ ಕಾರಣದಿಂದ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ.58 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.