ಬೆಂಗಳೂರು: ಗಾಲ್ವಾನ್ ಗಡಿಯಲ್ಲಿ ನಡೆದ ಚೀನಾ ಸೈನಿಕರ ಜತೆಗಿನ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮೌನಾಚರಣೆ ಮೂಲಕ ಗೌರವ ನಮನ ಸಮರ್ಪಿಸಲಾಯಿತು.
ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ,ಸಲೀಂ ಅಹಮದ್,ಸತೀಶ್ ಜಾರಕಿಹೊಳಿ,ಹಿರಿಯ ಮುಖಂಡರಾದ ದಿನೇಶ್ ಗುಂಡೂರಾವ್, ಬಿ.ಕೆ.ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್,ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.