ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡತುಮಕೂರು ಗ್ರಾಮದಲ್ಲಿ ಏರ್ಪಡಿಸಲಾದ ಘನತ್ಯಾಜ್ಯ ವಿಲೇವಾರಿ ಘಟಕದ ಶಂಕುಸ್ಥಾಪನೆ ಹಾಗೂ ಒಣಕಸ ಸಂಗ್ರಹಣೆಗಾಗಿ ಬಕೆಟ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಅವರು ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್ ಮಾತನಾಡಿ,ನಗರ ಪ್ರದೇಶದಲ್ಲಿ ಮನೆಮನೆ ಕಸ ಸಂಗ್ರಹಣೆ, ಹಸಿ, ಒಣ ಕಸ ವಿಲೇವಾರಿ ಕಾರ್ಯ ನಡೆಯುತ್ತದೆ. ಅದರಂತೆ ಗ್ರಾಮೀಣ ಭಾಗದಲ್ಲೂ ಕಸ ವಿಲೇವಾರಿ ಅದರಲ್ಲೂ ಪ್ಲಾಸ್ಟಿಕ್, ಬಾಟಲಿ, ಕಬ್ಬಿಣ ಹೀಗೆ ಘನತ್ಯಾಜ್ಯಗಳನ್ನು ವಿಲೇವಾರಿ ಮಾಡುವ ಅಗತ್ಯವಿದೆ. ಏಕೆಂದರೆ ಗ್ರಾಮೀಣ ಭಾಗದ ರಸ್ತೆಯಂಚಿನಲ್ಲಿ ಎಲ್ಲೆಂದರಲ್ಲಿ ಘನತ್ಯಾಜ್ಯಗಳನ್ನು ಎಸೆಯಲಾಗುತ್ತದೆ. ಅವು ಮಣ್ಣಲ್ಲಿ ಕರಗದೇ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿವೆ. ಇಂತಹ ಸಮಸ್ಯೆ ದೂರವಾಗಿಸುವ ನಿಟ್ಟಿನಲ್ಲಿ ಘನತ್ಯಾಜ್ಯ ಘಟಕ ಸಹಕಾರಿ ಎಂದರು.
ಈ ವೇಳೆ ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ರೆಡ್ಡಿ ,ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ,ಉಪಾಧ್ಯಕ್ಷೆ ಮುನಿರತ್ನಮ್ಮ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಟಿ.ಎ.ರವಿಕುಮಾರ್ ವೀಣಾ ಲೋಕೇಶ್,ರೇಣುಕಾ ವೆಂಕಟೇಶ್,ಬಿ.ಆರ್.ಲಕ್ಷ್ಮೀಶ್,ವೇಣುಗೋಪಾಲ್.ಆರ್,ತಿಮ್ಮಕ್ಕ ಮುನಿಯಪ್ಪ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಮುರುಡಯ್ಯ,ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೌಮ್ಯ.ಸಿ.ಜಿ,ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ್, ಮುಖಂಡರಾದ ಲೋಕೇಶ್,ಟಿ.ಜಿ.ಮಂಜುನಾಥ್ ಮತ್ತಿತರಿದ್ದರು.