ದೊಡ್ಡಬಳ್ಳಾಪುರ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರು, ಪರಿಶಿಷ್ಟ ಪಂಗಡದ ಸಮುದಾಯದ ಒಳಗೆ ವಿವಾಹವಾದ(ಒಳಪಂಗಡ ವಿವಾಹ), ಸರಳ ವಿವಾಹವಾದ, ವಿಧವಾ ವಿವಾಹವಾದ ಹಾಗೂ ಅಂತರ್ ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಒಳಪಂಗಡ ವಿವಾಹ, ಸರಳ ವಿವಾಹ, ವಿಧವಾ ವಿವಾಹ, ಹಾಗೂ ಅಂತರ್ ಜಾತಿ ವಿವಾಹ ಯೋಜನೆಗಳಡಿ ನಿಯಮಾನುಸಾರ/ಷರತ್ತುಗಳನ್ವಯ ವಿವಾಹವಾದ ದಂಪತಿಗಳು ತಾಲ್ಲೂಕು ಮಟ್ಟದ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮೊ.ಸಂ.: 9480843020, ಕಚೇರಿ ದೂ.ಸಂ.: 29787448, ಅಥವಾ ಸಮಾಜ ಕಲ್ಯಾಣ ಇಲಾಖೆಯ ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕರು ಮೊ.ಸಂ.: 9480843053, ಕಚೇರಿ ದೂ.ಸಂ.: 27681784, ದೊಡ್ಡಬಳ್ಳಾಪುರ ತಾಲ್ಲೂಕು ಸಹಾಯಕ ನಿರ್ದೇಶಕರು ಮೊ.ಸಂ.: 9480843054, ಕಚೇರಿ ದೂ.ಸಂ.: 27623681, ಹೊಸಕೋಟೆ ತಾಲ್ಲೂಕು ಸಹಾಯಕ ನಿರ್ದೇಶಕರು ಮೊ.ಸಂ.: 9480843055, ಕಚೇರಿ ದೂ.ಸಂ.: 27931528, ಹಾಗೂ ನೆಲಮಂಗಲ ತಾಲ್ಲೂಕು ಸಹಾಯಕ ನಿರ್ದೇಶಕರು ಮೊ.ಸಂ.: 9480843056, ಕಚೇರಿ ದೂ.ಸಂ.: 27723172, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹನುಮಂತರಾಯಪ್ಪ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.