ಜೂನ್ 27 ರಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ಕಾರ್ಯಕ್ರಮ

ದೊಡ್ಡಬಳ್ಳಾಪುರ: 511 ನೇ  ಕೆಂಪೇಗೌಡ  ಜಯಂತಿ ಪ್ರಯುಕ್ತ,ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ  ಎತ್ತರದ ಪ್ರತಿಮೆಯ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ  ಭೂಮಿ ಪೂಜೆ ಕಾರ್ಯಕ್ರಮವು ಜೂನ್ 27 ರಂದು ಬೆಳಗ್ಗೆ 10.30 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ  ತಾಲ್ಲೂಕಿನಲ್ಲಿರುವ ಕೆಂಪೇಗೌಡ  ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೂಮಿ ಪೂಜೆ ಹಾಗೂ ಮಾದರಿ ಪ್ರತಿಮೆಯ ಅನಾವರಣ ಮಾಡಲಿದ್ದಾರೆ. 

ಶ್ರೀ ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು,ಶ್ರೀ ಸುತ್ತೂರು ಮಠದ  ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು,ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು,ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿಗಳು ಹಾಗೂ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ.ಸದಾನಂದಗೌಡ, ಕಾನೂನು ಸಂಸದೀಯ ವ್ಯವಹಾರಗಳ  ಸಚಿವರಾದ  ಪ್ರಹ್ಲಾದ್ ಜೋಶಿ,  ರೈಲ್ವೆ  ರಾಜ್ಯ ಸಚಿವರಾದ ಸುರೇಶ್ ಅಂಗಡಿ,  ಮಾಜಿ ರಾಜ್ಯಪಾಲರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಅವರ  ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. 

ಉಪಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾದ  ಡಾ. ಅಶ್ವಥ್ ನಾರಾಯಣ್, ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ.ಎಂ.ಕಾರಜೋಳ, ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಸಂಗಪ್ಪ ಸವದಿ ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ದೇವನಹಳ್ಳಿ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್.ಎನ್.ನಿಸರ್ಗ ನಾರಾಯಣಸ್ವಾಮಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. 

ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್.ಅಶೋಕ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ  ಸಕಾಲ ಸಚಿವರಾದ  ಎಸ್.ಸುರೇಶ್ ಕುಮಾರ್, ವಸತಿ ಸಚಿವರಾದ  ವಿ.ಸೋಮಣ್ಣ, ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಪ್ರವಾಸೋದ್ಯಮ, ಕನ್ನಡ  ಮತ್ತು ಸಂಸ್ಕೃತಿ,ಯುವ ಸಬಲಿಕರಣ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಗೋಪಾಲಯ್ಯ, ನಗರಾಭಿವೃದ್ಧಿ ಸಚಿವರಾದ ಬಿ.ಎ ಬಸವರಾಜು(ಬೈರತಿ), ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಪೌರಾಡಳಿತ ಮತ್ತು  ತೋಟಗಾರಿಕೆ  ಹಾಗೂ ರೇಷ್ಮೆ  ಸಚಿವರಾದ  ಕೆ.ಸಿ.ನಾರಾಯಣಗೌಡ, ಶಾಸಕರು ಹಾಗೂ ಮುಖ್ಯಮಂತ್ರಿಗಳ  ರಾಜಕೀಯ ಕಾರ್ಯದರ್ಶಿ  ಎಸ್.ಆರ್.ವಿಶ್ವನಾಥ್, ವಿಧಾನಸಭೆ ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಬೃಹತ್ ಬೆಂಗಳೂರು  ಮಹಾನಗರ ಪಾಲಿಕೆಯ  ಮಹಾಪೌರರಾದ  ಎಂ.ಗೌತಮ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ,  ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್,ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್,ಕನಕಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ,ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ,  ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್,ಮಾಗಡಿ ವಿಧಾನಸಭಾ ಶಾಸಕರಾದ ಎ.ಮಂಜುನಾಥ್,ವಿಧಾನಸಭಾ ಪರಿಷತ್ ಸದಸ್ಯರುಗಳಾದ ಹೆಚ್.ಎಂ.ರೇವಣ್ಣ, ಎಸ್.ರವಿ,ಪುಟ್ಟಣ್ಣ,ಅ.ದೇವೇಗೌಡ,ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ರ್ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರುಗಳಾಗಿ ಭಾಗವಹಿಸಲಿದ್ದಾರೆ. 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅನಿಲ್ ಕುಮಾರ್,ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಮೂಲ ಸೌಲಭ್ಯ,ಅಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್,ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ,ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹರಿ ಮರಾರ್, ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿ  ಕ್ಯಾಪ್ಟನ್ ಶ್ರೀನಿವಾಸ ಗೌಡ, ನಾಡಪ್ರಭು ಕೆಂಪೇಗೌಡ  ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರುಗಳಾದ ಹಾಗೂ ಮಾಗಡಿಯ ನಾಡಪ್ರಭು ಕೆಂಪೇಗೌಡ  ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ,ಬೆಂಗಳೂರು ವಿಶ್ವವಿದ್ಯಾಲಯದ ನಾಡಪ್ರಭು ಕೆಂಪೇಗೌಡ ಅಧ್ಯಯನ ಪೀಠದ ನಿರ್ದೇಶಕರು ಮತ್ತು ಇತಿಹಾಸ ಪ್ರಾಧ್ಯಾಪಕ ಡಾ. ಶೇಖ್ ಮಸ್ತಾನ್,ಮಾಗಡಿಯ ಎಂ.ರಾಮಣ್ಣ  ಭಾಗವಹಿಸಲಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!